ಸಾಂತ್ವನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಶೇಷ ದುರ್ಬಲ ವರ್ಗದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ 5 ಲಕ್ಷ ರೂ. ಗಳ ಘಟಕ ವೆಚ್ಚಕ್ಕೆ ಶೇಕಡ 50 ರಷ್ಟು ಸಹಾಯಧನ ಮತ್ತು ಶೇಕಡ 3ರ ಬಡ್ಡಿ ದರದಲ್ಲಿ ಶೇಕಡ 50ರಷ್ಟು ಸಾಲವನ್ನು ಸಾಂತ್ವನ ಯೋಜನೆ ಅಡಿ ನೀಡಲಾಗುವುದು.

ರಾಜ್ಯದಲ್ಲಿ ಕೋಮುಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ 2 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು.

ಫಲಾನುಭವಿಯು ಹೊಂದಿರಬೇಕಾದ ಅರ್ಹತೆಗಳು. ಅಲ್ಪಸಂಖ್ಯಾತರಾಗಿರಬೇಕು, ಖಾಯಂ ನಿವಾಸಿ ಆಗಿರಬೇಕು, ಫಲಾನುಭವಿಯ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು, ಕುಟುಂಬದ ವಾರ್ಷಿಕ ಆದಾಯ 8 ಲಕ್ಷಗಳನ್ನು ಮೀರಿರಬಾರದು. ಸಂತ್ರಸ್ತರಾದ ಫಲಾನುಭವಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾಧಿಕಾರಿ, ಆಯುಕ್ತರು, ತಹಸಿಲ್ದಾರ್, ಪೊಲೀಸ್ ಇಲಾಖೆ, ನ್ಯಾಯಾಲಯದ ಆದೇಶ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ವರದಿಯನ್ನು ಪಡೆದಿರತಕ್ಕದ್ದು.

ಅರ್ಜಿದಾರರು ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿ ಇರಬಾರದು ಅಥವಾ ಅವರ ಕುಟುಂಬದವರು ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಯೋಜನೆ ಹೊರತುಪಡಿಸಿ).

ನಿಗದಿತ ನಮೂನೆ ಅರ್ಜಿ, ಇತ್ತೀಚಿನ ಎರಡು ಪಾಸ್ಪೋರ್ಟ್ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ,.ಬ್ಯಾಂಕ್ ಪಾಸ್ ಬುಕ್ ಪ್ರತಿ, ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರ ಅಲ್ಲದ ಬಗ್ಗೆ ಧೃಡೀಕರಣ ಪತ್ರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ವರದಿಯನ್ನು ಒಳಗೊಂಡ ಅಗತ್ಯ ದಾಖಲೆಗಳೊಂದಿಗೆ  kmdconline.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಬರ್ 1599,  ವೈ.ಎನ್ ಬಿಲ್ಡಿಂಗ್, ಹೊಸ ಬಸ್ ಸ್ಟ್ಯಾಂಡ್ ಹಿಂಭಾಗ ಯಲಹಂಕ ಬೀದಿ, ದೇವನಹಳ್ಳಿ -562110 ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08027681786, ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 hour ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

2 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

12 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

23 hours ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

24 hours ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

1 day ago