ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ವಿಶೇಷಚೇತನ ನಾಗಪ್ಪನವರಿಗೆ ಸನ್ಮಾನ

ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಸನ್ಮಾನ ಸಲ್ಲಿಸಲಾಯಿತು.

ಈ ಒಂದು ಅಭಿನಂದನಾ ಸಮಾರಂಭದಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಾದ ದೊಡ್ಡಬಳ್ಳಾಪುರ ತಾಲೂಕಿನ ತುರುವನಹಳ್ಳಿ ಗ್ರಾಮದ ಚಿಕ್ಕ ನಾಗಪ್ಪನವರು ವಿಶೇಷ ಚೇತನರಾಗಿದ್ದು, ಇವರು  ಕಲಾವಿದರಾಗಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ನಾಟಕ, ಭಜನೆ, ಜಾನಪದ ಹಾಗೂ ಇತ್ಯಾದಿ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.

ವಿಶೇಷ ಚೇತನರಾಗಿದ್ದರು ಸಹ ಉತ್ತಮ ರೀತಿಯಲ್ಲಿ ಕಲಾವಿದ ವೃತ್ತಿಯ ಜೊತೆಗೆ ಊರಿನ ವಾಟರ್ ಮ್ಯಾನ್ ಕೆಲಸವನ್ನು ಸಹ ಮಾಡುತ್ತಿದ್ದು ಇವರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮನೆ ಬಾಗಿಲಿಗೆ ಜಿಲ್ಲಾಡಳಿತದಿಂದ ಸನ್ಮಾನ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಗಾಂಧಿ ಜಯಂತಿಯ ಪ್ರಯುಕ್ತ ಊರಿನ ಸರ್ಕಾರಿ ಶಾಲೆಯಲ್ಲಿ ಮುಖಂಡರು ಎಸ್ ಡಿ ಎಮ್ ಸಿ ಅಧ್ಯಕ್ಷರು ಉಪಾಧ್ಯಕ್ಷರು ಹಾಲಿನ ಡೇರಿ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಊರಿನ ಗ್ರಾಮಸ್ಥರು ಮಕ್ಕಳೊಂದಿಗೆ ವಿಶೇಷ ಚೇತನರಾದ ಚಿಕ್ಕ ನಾಗಪ್ಪ ನವರಿಗೆ ವಿಶೇಷ ರೀತಿಯಲ್ಲಿ ಸನ್ಮಾನವನ್ನು ಮಾಡಲಾಯಿತು.

Ramesh Babu

Journalist

Recent Posts

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

58 minutes ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

5 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

6 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

12 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

12 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

1 day ago