ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಪತ್ರದ ಸಾರಾಂಶ ಇಂತಿದೆ;
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ.
ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ ಎಂದು ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…