ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ಅಸ್ಪೃಶ್ಯತೆ, ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಇಲ್ಲಿಯವರೆಗೂ ಆಡಳಿತ ನಡೆಸಿರುವ ಯಾರೊಬ್ಬರು ಜಾರಿಗೆ ತಂದಿಲ್ಲ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿಕೊಟ್ಟಿರುವ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡುವಲ್ಲಿ ವಿಫಲವಾಗಿರುವುದೇ ದೇಶದಲ್ಲಿ ಬಡವರು ಇನ್ನೂ ಬಡವರಾಗಿಯೇ ಉಳಿಯುವಂತಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಬಹಳಷ್ಟು ಬಡಜನತೆ ಇಂದಿಗೂ ಸೂರು ಹಾಗೂ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕಿದೆ. ಈ ದಿಸೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಸ್.ಸಿ/ಎಸ್.ಟಿ ಹಿಂದುಳಿದವರು, ಧಾರ್ಮಿಕ ಅಲ್ಪಾಸಂಖ್ಯಾತರು ಬಹುಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಲಾಗುತ್ತಿದ್ದು, ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ 35ರಿಂದ 40 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು. ಬಡ ಕುಟುಂಬಗಳಿಗೆ ಹಕ್ಕುಪತ್ರಳನ್ನು ವಿತರಿಸಬೇಕು. ಜಿಲ್ಲೆಯಲ್ಲಿ ಬಡ ಕುಟುಂಬಗಳಿಗೆ ಶೇ.50ರಷ್ಟು ಸ್ಮಶಾನಗಳ ಕೊರತೆಯಿದ್ದು, ಸ್ಮಶಾನ ಮಂಜೂರು ಮಾಡಬೇಕು. ಸರ್ವೆ, ಪೋಡಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ನಿವೇಶನರಹಿತರಿಗೆ ನಿವೇಶನ ಮಂಜೂರು ಮಾಡಬೇಕು. ನಿರುದ್ಯೋಗಳಿಗೆ ಮಾಸಿಕ ₹5 ಸಾವಿರ ಭತ್ಯೆನೀಡಬೇಕು. ಜನರಿಗೆ ಗ್ರಾಮ ಪಂಚಾಯಿತಿ , ಸ್ಥಳೀಯ ಆಡಳಿತಗಳು ಮೂಲಕ ಸೌಕರ್ಯಗಳನ್ನು ಒದಗಿಸಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಎಸ್.ಸಿ, ಎಸ್.ಟಿ ಜಾತಿಯ ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದು ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿರುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು ಎನ್ನುವ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…