ಸಾಧನೆಯ ಹಾದಿಯಲ್ಲಿ ಪರಿಶ್ರಮ ಸ್ಪೂರ್ತಿಯಾಗಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್‌ನ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.
ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ನೇತೃತ್ವದಲ್ಲಿ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ಶನಿವಾರ ನಡೆದ ಆಗಮನ-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಮಗ್ರ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಜಾಲಪ್ಪ ವಿದ್ಯಾ ಸಂಸ್ಥೆಯಲ್ಲಿ ಹಲವು ಶೈಕ್ಷಣಿಕ ಘಟಕಗಳಿವೆ. ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಟ್ಟಾಗ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪ್ರಾಂಶುಪಾಲ ಡಾ.ಆರ್.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ವಿಭಾಗ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್, ಕೆ.ಸಿ.ಲಕ್ಷ್ಮೀಶ, ಬಾಬು ಸಾಬಿ, ಸಾಂಸ್ಕೃತಿಕ ಘಟಕದ ಸಂಚಾಲಕರಾದ ಭಾನುಶ್ರೀ ಮತ್ತಿತರರು ಉಪಸ್ಥಿತರಿದ್ದರು.
ಪ್ರಥಮ ವರ್ಷದ ಬಿಕಾಂ, ಬಿಬಿಎ, ಬಿಸಿಎ, ಬಿಎಸ್‌ಸಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸ್ವಾಗತಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…