ಸಾಧನೆಯ ಹಾದಿಗೆ ಪರಿಶ್ರಮವೇ ಸ್ಫೂರ್ತಿ-ಜೆ.ರಾಜೇಂದ್ರ

ಸಾಧನೆಯ ಹಾದಿಯಲ್ಲಿ ಪರಿಶ್ರಮ ಸ್ಪೂರ್ತಿಯಾಗಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ದೇವರಾಜ ಅರಸ್‌ ಎಜುಕೇಶನಲ್‌ ಟ್ರಸ್ಟ್‌ನ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ನೇತೃತ್ವದಲ್ಲಿ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ಶನಿವಾರ ನಡೆದ ಆಗಮನ-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಮಗ್ರ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಜಾಲಪ್ಪ ವಿದ್ಯಾ ಸಂಸ್ಥೆಯಲ್ಲಿ ಹಲವು ಶೈಕ್ಷಣಿಕ ಘಟಕಗಳಿವೆ. ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಟ್ಟಾಗ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ವಿಭಾಗ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್, ಕೆ.ಸಿ.ಲಕ್ಷ್ಮೀಶ, ಬಾಬು ಸಾಬಿ, ಸಾಂಸ್ಕೃತಿಕ ಘಟಕದ ಸಂಚಾಲಕರಾದ ಭಾನುಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಪ್ರಥಮ ವರ್ಷದ ಬಿಕಾಂ, ಬಿಬಿಎ, ಬಿಸಿಎ, ಬಿಎಸ್‌ಸಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸ್ವಾಗತಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

14 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

15 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

19 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

20 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

1 day ago