ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ

ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ  ಎಂದು ತಿಳಿಸಿದರು.

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago