ದೇವನಹಳ್ಳಿ: ಜಾತಿಜನಗಣತಿ ವಿಚಾರವಾಗಿ ಒಕ್ಕಲಿಗರ ಸಮುದಾಯದಲ್ಲಿ ಹಲವಾರು ಉಪಜಾತಿಗಳಿವೆ ಯಾವುದೇ ಕಾರಣಕ್ಕೂ ಒಂದೂ ತಪ್ಪದೇ ಗಣನೆಗೆ ಪಡೆಯಬೇಕು ಮತ್ತು ಉಪಜಾತಿ ಕಾಲಂನಲ್ಲಿ ಉಪಜಾತಿಗಳ ಹೆಸರನ್ನು ನಮೂದಿಸಬೇಕು ಆಗ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆಯುತ್ತದೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ವಿನೋದ್ ಗೌಡ ತಿಳಿಸಿದರು.
ದೇವನಹಳ್ಳಿ ಪಟ್ಟಣದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಒಕ್ಕಲಿಗ ಧರ್ಮ ಮಹಾಸಭಾ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡುತ್ತಿದ್ದು ಒಕ್ಕಲಿಗರಲ್ಲೂ ಉಪ ಜಾತಿಗಳಿದ್ದು, ಅದರಂತೆ ಸರಿಯಾಗಿ ನಮೂದಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಕೃಷ್ಣಪ್ಪ ಸೇರಿದಂತೆ ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಪದಾಧಿಕಾರಿಗಳು ಇದ್ದರು.