ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ
ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ.

ಅದರಂತೆ ಆಯೋಗದಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.

2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ ಹಂಚಿಕೆ (share) ಮಾಡಿರುವ ಮೊಬೈಲ್ ಸಂಖ್ಯೆ: 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ.

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp, Facebook, Twitter, Instagram ಇತ್ಯಾದಿಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು forward ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

4 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

7 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

10 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

11 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

13 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 hours ago