ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ಓದಿ….

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು ಈ ಕೆಳಕಂಡಂತಿವೆ….

• ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

• ಸಮೀಕ್ಷೆ ಕಾರ್ಯಕ್ಕೆ ಮುಂದೆಯೂ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

• ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.

• ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು.

• ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು.

• ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ‌

• ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

• ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.

• ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಲಾಗುವುದು.

• ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಲಾಗುವುದು.

• ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕಿದೆ. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು.

• ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.

• ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.

• ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

25 minutes ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

16 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

22 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago