ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಮನೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಆದಾಯ ಮೀರಿದ ಆಸ್ತಿ ಸಂಪಾದಿಸಿದ ಆರೋಪದಡಿಯಲ್ಲಿ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
ದಾಳಿಯ ವೇಳೆ 40 ಕೆ.ಜಿ ಬೆಳ್ಳಿಯ ಗಟ್ಟಿ ಹಾಗೂ 200 ಮೂಖಬೆಲೆ ನೋಟುಗಳ ಬಂಡಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಲೋಕಾಯುಕ್ತ ಪೊಲೀಸರು ಗುರುವಾರವೂ ಮಧ್ಯಪ್ರದೇಶ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್‌ವೊಬ್ಬರ ಮನೆ ಮೇಲೆ ದಾಳಿ ನಡೆಸಿ ₹2.85 ಕೋಟಿ ನಗದು ಸೇರಿದಂತೆ 3 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದರು.
ನಗದು ಜತೆಗೆ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…