ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ

ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಪೂರ್ವ ಕಿಂಕೋ ನೌಕರರ ವೇತನವನ್ನು ಶೇ.12.50ರಷ್ಟು ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದ ಪ್ರಕಾರ, ದಿನಾಂಕ 31.03.2025ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.12.50ರಷ್ಟು ಹೆಚ್ಚಿಸಿ, ಉನ್ನತ ವೇತನ ಶ್ರೇಣಿ ಹಾಗೂ ಮಧ್ಯಂತರ (Selection Grade) ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗುವುದು. ಈ ಪರಿಷ್ಕರಣೆ 01.04.2025ರಿಂದ ಜಾರಿಯಾಗಲಿದ್ದು, 01.07.2026ರ ಮಾಹೆಯ ವೇತನದಲ್ಲಿ ಅನುಷ್ಠಾನಗೊಳ್ಳಲಿದೆ.

ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು 01.04.2025ರಿಂದ 30.06.2026ರ ಅವಧಿಗೆ ಸಂಬಂಧಿಸಿದಂತೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಂತ ಹಂತವಾಗಿ ಪಾವತಿಸಲಾಗುವುದು. ಸಾರಿಗೆ ನಿಗಮಗಳು ಕಳೆದ ಹಲವು ವರ್ಷಗಳಿಂದ ನಷ್ಟ ಅನುಭವಿಸುತ್ತಿರುವುದರಿಂದ, ಪ್ರಸ್ತುತ ರೂ.7130.80 ಕೋಟಿ ಹೊಣೆಗಾರಿಕೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಹಿಂಬಾಕಿ ಪಾವತಿ ಹಂತ ಹಂತವಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಹೊರಡಿಸಿದ್ದು, ಪ್ರಧಾನ ಮಹಾಲೇಖಪಾಲರು ಹಾಗೂ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ.

ಈ ನಿರ್ಧಾರದಿಂದ ಸಾರಿಗೆ ನಿಗಮಗಳ ಸಾವಿರಾರು ನೌಕರರು ಮತ್ತು ಅಧಿಕಾರಿಗಳಿಗೆ ಆರ್ಥಿಕ ನೆರವು ದೊರೆಯಲಿದ್ದು, ನಾಲ್ಕು ವರ್ಷದ ಅವಧಿಗೆ (01.04.2025ರಿಂದ 31.03.2029ರವರೆಗೆ) ವೇತನ ಪರಿಷ್ಕರಣೆ ಜಾರಿಯಲ್ಲಿರಲಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

11 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

21 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago