ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವುಮಾಡಿಕೊಡಲಾಗುವುದು ಎಂದು ತಿಳಿಸಿದಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ವ್ಯವಸ್ಥೆ ಜಾರಿ ಮಾಡಲು ತೀರ್ಮಾನಕ್ಕೆ ಬರಲಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ
ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್ನಲ್ಲಿ ಟಿಕೆಟ್ ಪಡೆಯದೇ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಂದು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಯಾಬಿನೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ. ಆ ಬಳಿಕ ಎಲ್ಲವು ಗೊತ್ತಾಗಲಿದೆ ಎಂದರು.
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…