Categories: ರಾಜ್ಯ

ಸಾರಿಗೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ: ಅಧಿಕೃತ ಘೋಷಣೆಯೊಂದೇ ಬಾಕಿ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವುಮಾಡಿಕೊಡಲಾಗುವುದು ಎಂದು ತಿಳಿಸಿದಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ವ್ಯವಸ್ಥೆ ಜಾರಿ ಮಾಡಲು ತೀರ್ಮಾನಕ್ಕೆ ಬರಲಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ

ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್​ನಲ್ಲಿ ಟಿಕೆಟ್ ಪಡೆಯದೇ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇಂದು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ. ಆ ಬಳಿಕ ಎಲ್ಲವು ಗೊತ್ತಾಗಲಿದೆ ಎಂದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago