ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ವೇಳೆ ತಿಳಿದುಬಂದ ಅಂಶವೇನೆಂದರೆ, ಈ ಪ್ರಕರಣಗಳಂತೆಯೆ ಭಾರತದಾದ್ಯಂತ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್‌ನಲ್ಲಿ ದಾಖಲಾಗಿರುತ್ತದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ, ಅದರಲ್ಲಿ 135 ಪ್ರಕರಣಗಳು ಬೆಂಗಳೂರು ನಗರದ ವ್ಯಾಪ್ತಿಗೆ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯವು 158,094,159 ರೂ. ಎಂದು ಕಂಡುಬಂದಿದೆ. ಅದರಲ್ಲಿ 62,83,080 ಹಣವನ್ನು 30 ವಿವಿಧ ಬ್ಯಾಂಕ್ ಖಾತೆಗಳಿಂದ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್‌ಗಳು, 2 ಲ್ಯಾಪ್‌ಟಾಪ್‌ಗಳು, 15 ಸಿಮ್ ಕಾರ್ಡ್‌ಗಳು, 3 ಬ್ಯಾಂಕ್ ಚೆಕ್ ಬುಕ್‌ಗಳು ಹಾಗೂ ಇದಕ್ಕೆ ಸಂಬಂಧಪಟ್ಟಂತಹ ಇತರೇ ದಾಖಲಾತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.
ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನ ಜ್ಯುವೆಲೆರಿ ಅಂಗಡಿಯೊಂದರಲ್ಲಿ ಚೆನ್ನೈ ಬ್ರಾಂಚ್‌ನ ಬ್ಯೂರೊ ಆಫ್ ಸ್ಟ್ಯಾಂಡರ್ಡ್ ಅಧಿಕಾರಿಗಳೆಂದು ಹೇಳಿಕೊಂಡು, ಜ್ಯುವೆಲೆರಿ ಅಂಗಡಿಯಲ್ಲಿ ಹಾಲ್‌ಮಾರ್ಕ್ ಪರಿಶೀಲನೆಗೆಂದು ಬಂದು, ಚಿನ್ನಾಭರಣಗಳನ್ನು ದೋಚಿದ್ದ ಕುಖ್ಯಾತ ಅಂತರರಾಜ್ಯದ 04 ಜನ ದರೋಡೆಕೋರರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅವರುಗಳಿಂದ 1 ಕೆ.ಜಿ 248 ಗ್ರಾಂ ತೂಕದ ₹85 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಜ್ಯುವೆಲೆರಿ ಅಂಗಡಿಯ ಡಿ.ವಿ.ಆರ್‌ನ್ನು ಹಾಗು ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.
ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆಯನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯವರು ಆಕೆಯ ವಶದಿಂದ ಸುಮಾರು ₹ 30 ಲಕ್ಷ ಬೆಲೆಬಾಳುವ 523 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…