ಸಾರ್ವಜನಿಕರಿಗೆ ಸರ್ಕಾರಿ ಸೇವೆ ಶೀಘ್ರವಾಗಿ ತಲುಪಿಸಲು ಕಂದಾಯ ಇಲಾಖೆಯ ಹಲವು ಕ್ರಮ: ಕಳೆದ ಆರು ತಿಂಗಳಲ್ಲಿ 26,151 ಕಡತಗಳ ವಿಲೇವಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಸಾರ್ವಜನಿಕರ ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಲು ಕಳೆದ ಆರು ತಿಂಗಳಲ್ಲಿ ಕಂದಾಯ ಇಲಾಖೆ ಹಲವು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ (ಕಳೆದ 6 ತಿಂಗಳಲ್ಲಿ) ಸಾಧಿಸಿರುವ ಪ್ರಗತಿ ವಿವರದ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.

*ಮ್ಯುಟೇಷನ್ ವಿಲೇವಾರಿ ಪ್ರಗತಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೆ-ಸ್ಲಿಪ್‌ಗಳು, ಪೌತಿ ಖಾತೆಗಳು, ದಾನ ಪತ್ರಗಳು ವಿಭಾಗದ ಪತ್ರಗಳು ಇತ್ಯಾದಿ. ಖಾತೆಗಳನ್ನು ಮಾಡಲು 7 ದಿನ ನೋಟೀಸ್ ಅವಧಿ ಇದ್ದು, ನೋಟೀಸ್ ಅವಧಿ ಮುಗಿದ ತಕ್ಷಣ 8ನೇ ದಿನ, 9ನೇ ದಿನಗಳಲ್ಲಿ ಖಾತೆ ಬದಲಾವಣೆ ಆಗುತ್ತಿದ್ದು, ಕಳೆದ 6 ತಿಂಗಳಿನಲ್ಲಿ ಸುಮಾರು 26,151 ಕಡತಗಳನ್ನು ವಿಲೇವಾರಿ ಮಾಡಲಾಗಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದರು.

ಕೆರೆ ಒತ್ತುವರಿ ತೆರವು ತೆರವುಗೊಳಿಸುವಲ್ಲಿ ಸಾಧಿಸಿರುವ ಪ್ರಗತಿ

ಜಿಲ್ಲೆಯಲ್ಲಿ ಪ್ರತಿ ವಾರ ಕೆರೆ ಒತ್ತುವರಿಯನ್ನು ಗುರುತಿಸುವುದು ಹಾಗೂ ತೆರವುಗೊಳಿಸುವ ಕಾರ್ಯ” ನಿರಂತರವಾಗಿ ಪ್ರಗತಿಯಲ್ಲಿ ಇದ್ದು, ಕಳೆದ 6 ತಿಂಗಳಿಂದ 520-11 ಎ/ಗುಂಟೆ ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಗಿರುತ್ತದೆ. ಒತ್ತುವರಿ ತೆರವುಗೊಳಿಸಿದ ನಂತರ ವಿಶೇಷವಾಗಿ ವಿನ್ಯಾಸಗೊಳಿಸಿದ ಬಾನಗಲ್ಲುಗಳನ್ನು ಮೂಲೆಗಳಲ್ಲಿ ಅಳವಡಿಸಲು ಕ್ರಮವಹಿಸಲಾಗುತ್ತಿದೆ.

*ಇ-ಕಚೇರಿ ನಿರ್ವಹಣೆಯಲ್ಲಿ ಸಾಧಿಸಿದ ಪ್ರಗತಿ*

 ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ಕಛೇರಿಯಲ್ಲಿ ಸಂಪೂರ್ಣವಾಗಿ ಇ-ಕಚೇರಿಯಲ್ಲಿ ಕಡತಗಳನ್ನು ನಿರ್ವಹಿಸುತ್ತಿದ್ದು, ಭೌತಿಕವಾಗಿ ಕಡತಗಳನ್ನು ನಿರ್ವಹಿಸುತ್ತಿರುವುದಿಲ್ಲ. ಉಪತಹಶೀಲ್ದಾರ್ ಕಛೇರಿ ಹಾಗೂ ರಾಜಸ್ವ ನಿರೀಕ್ಷಕರ ಕಚೇರಿಯಲ್ಲಿಯೂ ಸಹ ಇ-ಕಚೇರಿ ಪ್ರಾರಂಭಿಸಿದ್ದು, ಇ-ಕಚೇರಿಯಿಂದ ಕಡತಗಳನ್ನು ನಿರ್ವಹಿಸಲಾಗುತ್ತಿರುತ್ತದೆ.

ಗ್ರಾಮ ಆಡಳಿತಾಧಿಕಾರಿಗಳ ಕಚೇರಿಯಲ್ಲಿಯೂ ಸಹ ಇ-ಕಚೇರಿಯಿಂದ ಕಡತಗಳನ್ನು ನಿರ್ವಹಿಸಲು ಸೂಚಿಸಲಾಗಿರುತ್ತದೆ. ಇ- ಕಚೇರಿ ನಿರ್ವಹಣೆಯಿಂದ ಕಡತಗಳ ಚಲನವಲನದ ಬಗ್ಗೆ ಮಾಹಿತಿ ದೊರಕುತ್ತದೆ. ಕಡತಗಳ ನಾಪತ್ತೆ ಪ್ರಕರಣಗಳು ಉದ್ಭವಿಸುವುದಿಲ್ಲ, ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಿದಂತಾಗಿ ಸಾರ್ವಜನಿಕರಿಗೆ ಹಲವಾರು ರೀತಿಯ ಅನುಕೂಲಗಳು ಆಗುತ್ತಿವೆ.

*ಕಂದಾಯ ನ್ಯಾಯಾಲಯದ ಪ್ರಕರಣಗಳ ಪ್ರಗತಿ ವಿವರ*

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 494 ಪ್ರಕರಣಗಳು, ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 1669 ಪ್ರಕರಣಗಳು ಹಾಗೂ ತಹಶೀಲ್ದಾರ್ ರವರ ನ್ಯಾಯಾಲಯದಲ್ಲಿ 2094 ಪ್ರಕರಣಗಳು ಕಳೆದ 06 ತಿಂಗಳಿನಿಂದ ಒಟ್ಟು 4257 ನ್ಯಾಯಾಲಯ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದು, ಈ ಪೈಕಿ 975 ಎರಡು ವರ್ಷದ ಮೇಲ್ಪಟ್ಟ ಪ್ರಕರಣಗಳನ್ನು ಸಹ ವಿಲೇವಾರಿ ಮಾಡಲಾಗಿದೆ.

*ಸಕಾಲ ಸೇವೆಗಳಲ್ಲಿ ಸಾಧಿಸಿರುವ ಪ್ರಗತಿ*

ಕರ್ನಾಟಕ ಸಕಾಲ ಸೇವೆಗಳ ಕಾಯ್ದೆಯಡಿ 1191 ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ 6 ತಿಂಗಳಿನಿಂದ ಒಟ್ಟು 3,35,473 ಅರ್ಜಿಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 3,31,223 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ವಿಲೇವಾರಿ ಶೇ.93.8% ರಷ್ಟು ವಿಲೇವಾರಿ ಮಾಡಲಾಗಿರುತ್ತದೆ.

ಕಳೆದ 6 ತಿಂಗಳಲ್ಲಿ 4 ಬಾರಿ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಗಳಿಸಿ ನಾಗರೀಕರಿಗೆ ಸಕಾಲದೊಳಗೆ ಸೇವೆಗಳನ್ನು ಉತ್ತಮವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

  ಪೋಡಿ ಪ್ರಕರಣ, ಸ್ಮಶಾನ ಭೂಮಿ ಒತ್ತುವರಿ, ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸೇರಿದಂತೆ ಕಂದಾಯ ಇಲಾಖೆ ಅಧಿಸೂಚನೆ ಯಡಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸಮಸ್ಯೆಯನ್ನು ಶೀಘ್ರ ಇತ್ಯರ್ಥಪಡಿಸಲಾಗುತ್ತಿದೆ ಎಂದರು.

ಜನತಾದರ್ಶನದಲ್ಲಿ ಬರುವಂತಹ ದೂರು ಅಹವಾಲುಗಳನ್ನು 15 ದಿನಗಳ ಒಳಗಾಗಿ ಇತ್ಯರ್ಥ ಪಡಿಸಲಾಗುತ್ತಿದೆ ಸರ್ಕಾರದ ಕಳೆದ 06 ತಿಂಗಳಲ್ಲಿ ಇನ್ನೂ ಹಲವು ಯೋಜನೆಗಳು ಅನುಷ್ಠಾನಗೊಂಡಿದ್ದು, ಸಾರ್ವಜನಿಕರಿಗೆ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

   ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

39 seconds ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

16 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

16 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

23 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

23 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago