ಸ್ವತಃ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಫೀಲ್ಡ್ ಗೆ ಇಳಿದು ಆನೇಕಲ್ ಉಪವಿಭಾಗ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆಗಳನ್ನ ಆಲಿಸಿದರು.
ಜನಸಾಮಾನ್ಯರ ಅಂಗಡಿ ಮಳಿಗೆಗಳ ಬಳಿ ಖುದ್ದು ಭೇಟಿ ನೀಡಿ ಸಮಸ್ಯೆ ಆಲಿಸಿದರು. ರೋಲ್ ಕಾಲ್, ಕಳ್ಳತನ, ರೌಡಿ ಚಟುವಟಿಕೆಗಳ ಬಗ್ಗೆಯೂ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಣೆ ಮಾಡಿದರು. ರೋಲ್ ಕಾಲ್, ಕಳ್ಳತನ, ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಸೂಚಿಸಿದರು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಸಾರ್ವಜನಿಕರ ರಕ್ಷಣೆ ಮಾಡುವಲ್ಲಿ ಪೊಲೀಸ್ ಇಲಾಖೆ ಸದಾ ಸನ್ನದ್ಧವಾಗಿರುತ್ತದೆ ಎಂದು ಮನವರಿಕೆ ಮಾಡಿಕೊಡಲಾಯಿತು.
ಈ ವೇಳೆ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ, ಆನೇಕಲ್ ವಿಪವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಥ್ ನೀಡಿದರು.