ಸಾರ್ವಜನಿಕರ ಕುಂದುಕೊರತೆ ಆಲಿಸಿದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ: ರೋಲ್ ಕಾಲ್, ಕಳ್ಳತನ, ರೌಡಿ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಂದ‌ ಮಾಹಿತಿ ಸಂಗ್ರಹಣೆ

ಸ್ವತಃ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ ಅವರು ಫೀಲ್ಡ್ ಗೆ ಇಳಿದು ಆನೇಕಲ್ ಉಪವಿಭಾಗ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆಗಳನ್ನ ಆಲಿಸಿದರು.

ಜನಸಾಮಾನ್ಯರ ಅಂಗಡಿ ಮಳಿಗೆಗಳ ಬಳಿ ಖುದ್ದು ಭೇಟಿ ನೀಡಿ ಸಮಸ್ಯೆ ಆಲಿಸಿದರು. ರೋಲ್ ಕಾಲ್, ಕಳ್ಳತನ, ರೌಡಿ ಚಟುವಟಿಕೆಗಳ ಬಗ್ಗೆಯೂ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಣೆ ಮಾಡಿದರು. ರೋಲ್ ಕಾಲ್, ಕಳ್ಳತನ, ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಸೂಚಿಸಿದರು. ಸಮಾಜದಲ್ಲಿ ಶಾಂತಿ‌ ಸುವ್ಯವಸ್ಥೆ ಕಾಪಾಡುವಲ್ಲಿ, ಸಾರ್ವಜನಿಕರ ರಕ್ಷಣೆ ಮಾಡುವಲ್ಲಿ ಪೊಲೀಸ್ ಇಲಾಖೆ ಸದಾ ಸನ್ನದ್ಧವಾಗಿರುತ್ತದೆ ಎಂದು ಮನವರಿಕೆ ಮಾಡಿಕೊಡಲಾಯಿತು.

ಈ ವೇಳೆ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ, ಆನೇಕಲ್ ವಿಪವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಥ್ ನೀಡಿದರು.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 hour ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

3 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

10 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

18 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

19 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago