ಸಾರ್ವಜನಿಕರ ಸುರಕ್ಷತೆಗಾಗಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ

ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.

ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.

ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.

ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್‌ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

10 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

21 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago