ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ “ಕೆ-ಜಿಐಎಸ್ 2.0 ಸ್ಥಳೀಯ ಆಡಳಿತಕ್ಕಾಗಿ ಜಿಐಎಸ್ ಆಧಾರಿತ ಮಾಹಿತಿ ತಲುಪಿಸುವ ತಾಂತ್ರಿಕ ಕಾರ್ಯಾಗಾರ” ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕ ಆಡಳಿತದಲ್ಲಿ ಕೆಲಸ ಹಾಗೂ ಸೇವೆಗಳನ್ನು ತ್ವರಿತಗತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಜಿ ಐಎಸ್ ದತ್ತಾಂಶ ಸಹಕಾರಿ ಆಗಿಲಿದೆ. ಕೆಜಿ ಐಎಸ್ ಪೋರ್ಟಲ್, ಆಪ್ ನಲ್ಲಿ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದ ದತ್ತಾಂಶ ಕ್ರೋಡೀಕರಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳು ತಮಗೆ ಬೇಕಾದ ಮಾಹಿತಿಯನ್ನು ಅಲ್ಲಿ ಪಡೆದುಕೊಳ್ಳಬಹುದು. ಉದಾಹರಣೆಗೆ ಶಾಲಾ ಶಿಕ್ಷಣ ಇಲಾಖೆಯ ಯಾವುದಾದರೂ ಒಂದು ಸರ್ಕಾರಿ ಶಾಲೆಯ ಮಾಹಿತಿ ಬೇಕಾದಲ್ಲಿ, ಖುದ್ದಾಗಿ ಆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡದೆ ಕೆಜಿಐಎಸ್ ಪೋರ್ಟಲ್ ಮೂಲಕ ಆ ಶಾಲೆಯ ಜಮೀನು ವಿಸ್ತೀರ್ಣ, ಪಹಣಿ ವಿವರ, ಬೌಂಡರಿ ಲೈನ್ ಸೇರಿದಂತೆ ಶಾಲೆಯ ಸಂಪೂರ್ಣ ದತ್ತಾಂಶ ಪೋರ್ಟಲ್ ನಲ್ಲಿ ಸಿಗಲಿದೆ. ಹಾಗೆ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಸರ್ಕಾರಿ ಜಮೀನು, ಕೆರೆ ಕುಂಟೆ, ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಹಲವು ಇಲಾಖೆಗಳ ಮಾಹಿತಿ ಒಂದೇ ಪೋರ್ಟಲ್ ನಲ್ಲಿ ಲಭ್ಯವಿರಲಿದೆ. ಅಧಿಕಾರಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಕೆಜಿಐಎಸ್ ಪೋರ್ಟಲ್ ನಲ್ಲಿ ಸಿಗುವ ದತ್ತಾಂಶವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ. ರಾಜೇಶ್ ಎನ್.ಎಲ್ ಅವರು ಕೆ-ಜಿಐಎಸ್ ಆವೃತ್ತಿ 1.0 ಅನ್ನು 2016 ರಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಸುಮಾರು 600 ಜಿಐಎಸ್ ಪದರಗಳು ಮತ್ತು 20 ಲಕ್ಷ ಸರ್ಕಾರಿ ಆಸ್ತಿಗಳ ಮಾಹಿತಿಯನ್ನು ಕೆ-ಜಿಐಎಸ್ ಪೋರ್ಟಲ್‌ನಲ್ಲಿ ಒಂದೇ ಸೂರಿನಲ್ಲಿ ಲಭ್ಯವಾಗುವಂತೆ ತಂತ್ರಜ್ಞಾನವನ್ನು ಕೆಎಸ್‌ಆರ್‌ಎಸ್‌ಎಸಿ ಕೇಂದ್ರವು ಅಭಿವೃದ್ಧಿಪಡಿಸಿದೆ. ಇದರಲ್ಲಿ 41 ಮೊಬೈಲ್ ಅನ್ವಯಿಕೆಗಳು ಮತ್ತು 60 ವೆಬ್ ಅನ್ವಯಿಕೆಗಳು ಲಭ್ಯವಿದ್ದು, ನಾಗರಿಕರು ಮತ್ತು ಸರ್ಕಾರ ವಿವಿಧ ಇಲಾಖೆಗಳು ಬಳಸಿಕೊಳ್ಳುತ್ತಿರುವ ಬಗ್ಗೆ ತಿಳಿಸಿದರು.

ಕೆ-ಜಿಐಎಸ್ 2.0 ಜಿಲ್ಲಾ ಮಟ್ಟದ ಕಾರ್ಯಾಗಾರದ ಮುಖ್ಯ ಉದ್ದೇಶಗಳ ಕುರಿತು ಮಾತನಾಡುತ್ತಾ, ಪ್ರತಿ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ತನ್ನದೇ ಆದ ವೈಶಿಷ್ಟ್ಯಗಳ ಜೊತೆಗೆ ಸ್ಥಳೀಯ ಸಮಸ್ಯೆ ಹೊಂದಿದ್ದು, ಈ ಸಮಸ್ಯೆಗಳಿಗೆ ಭೂದೈಶಿಕ ದತ್ತಾಂಶದ ಮೂಲಕ ಪರಿಹಾರ ಕಂಡುಕೊಳ್ಳಲು ಹಾಗೂ ವೆಬ್ ಮತ್ತು ಮೊಬೈಲ್ ಅನ್ವಯಿಕೆಗಳನ್ನು ತಯಾರಿಸಲು ಸಹಕಾರಿಯಾಗಿದೆ.

ಯಾರ ಆಸ್ತಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ದಿಶಾಂಕ್ ಆ್ಯಪ್ ನಲ್ಲಿ ತಿಳಿಯಬಹುದಾಗಿದೆ. ಕೃಷಿ ಹವಾಮಾನ ವರದಿಯನ್ನು ಆ್ಯಪ್ ಮೂಲಕ 2-3 ದಿನ ಮುಂಚೆಯೇ ಪಡೆಯಬಹುದಾಗಿದೆ.

ಜಿಲ್ಲೆಯಿಂದ ಗ್ರಾಮ ಮಟ್ಟದವರೆಗೆ ತನ್ನದೇ ಆದ ವೈಶಿಷ್ಟ್ಯಗಳ ಜೊತೆಗೆ ಸ್ಥಳೀಯ ಸಮಸ್ಯೆಗಳು ಹೊಂದಿವೆ. ಇವುಗಳಿಗೆ ಭೂದೈಶಿಕ ದತ್ತಾಂಶದ ಮೂಲಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಸಮಗ್ರವಾಗಿ ಕೆಜಿಐಎಸ್ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕರಿಗೆ ಭೂಸಾರ, ದರ್ಪಣ, ದಿಶಾಂಕ್, ಭೂಮಿ, ಲ್ಯಾಂಡ್ ರೆವಿನ್ಯೂ ಮ್ಯಾಪಿಂಗ್, ಗ್ರಾಮ ಒನ್, ನಿಯರ್ ಬೈ ಪ್ಲೇಸಸ್ ಸೇರಿದಂತೆ ಹಲವು ಆಪ್ ಸಿದ್ದಪಡಿಸಲಾಗಿದ್ದು, ಈಗಾಗಲೇ ಎಐ ಆಧಾರಿತ ವ್ಯವಸ್ಥೆ ಕೂಡ ಪೋರ್ಟಲ್ ಹಾಗೂ ತಂತ್ರಾಂಶಗಳಲ್ಲಿ ಅಳವಡಿಸಲಾಗುತ್ತಿದೆ. ಸಾರ್ವಜನಿಕರು ಕೂಡ ವೆಬ್ ತಾಣವಾದ https://kgis.ksrsac.in/kgis ಪೋರ್ಟಲ್ ಬಳಸಿ ಅವಶ್ಯಕ ಮಾಹಿತಿ ಪಡೆಯಬಹುದು ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ಪಾಂಡುರಂಗ, ಸಂಸ್ಥೆಯ ವೈಜ್ಞಾನಿಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

7 hours ago

ಮಣ್ಣಿನಡಿ ಹುದುಗಿಹೋಗುತ್ತಿದ್ದ ವಿಜಯನಗರ ಕಾಲದ 6 ವೀರಗಲ್ಲುಗಳಿಗೆ ಮರುಜೀವ: ರಸ್ತೆ ವಿಸ್ತರಣೆ ವೇಳೆ ಪತ್ತೆ; ಪುರಾತತ್ವ ಇಲಾಖೆ ತ್ವರಿತ ಕಾರ್ಯಾಚರಣೆ

ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…

7 hours ago

ಅರಳುಮಲ್ಲಿಗೆ ಕ್ಷೇತ್ರದಿಂದ ಸ್ಪರ್ಧೆಗೆ ಕೃಷ್ಣಪ್ಪ ಒಲವು

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು…

8 hours ago

ಮಳೆ ಕೊರತೆ, ಟೊಮೆಟೊ ದರ ಕುಸಿತ: ಸಾಲದ ಸುಳಿಯಲ್ಲಿ ರೈತ!

ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…

12 hours ago

ಸಿನಿಮಾ ನೋಡಲು ಹೋದ ಕುಟುಂಬದ ಮನೆಗೆ ಕನ್ನ; 130 ಗ್ರಾಂ ಚಿನ್ನದೊಂದಿಗೆ ಸಿಕ್ಕಿಬಿದ್ದ ಕಳ್ಳ!

ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…

13 hours ago

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ……..

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…

20 hours ago