ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಸರಳವಾಗಿ ಜನ್ಮದಿನ ಆಚರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಅವರು, ರೋಗಿಗಳ ಆರೋಗ್ಯ ವಿಚಾರಿಸಿ, ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಈ ವೇಳೆ ಮಾತನಾಡಿದ ಸ್ನೇಹಿತರು ಹಾಗೂ ಒಡನಾಡಿಗಳು, ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಬದಲು, ಸಮಾಜಮುಖಿ ಕಾರ್ಯದ ಮೂಲಕ ಆಚರಿಸುವುದು ಉತ್ತಮ. ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದೇವೆ. ಅರ್ಜುನ್ ವಿರಾಟ್ ಅವರು ಮುಂದಿನ ದಿನಗಳಲ್ಲಿಯೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು, ಯುವಕರಿಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಚಂದನ್, ಸಂಜಯ್, ಜಯಂತ್, ಜಯಚಂದ್ರ, ಹರ್ಷ, ಅವಿನಾಶ್, ಹೇಮಂತ್, ಸಚಿನ್ ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…