ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಸಾಲುಮರದ ತಿಮ್ಮಕ್ಕ ಸಸಿಗಳನ್ನು ಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ಸಾಲುಮರದ ತಿಮ್ಮಕ್ಕ ಅವರ ಸೇವಾ ಕಾರ್ಯವನ್ನು ಗೌರವಿಸಿ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಂದ ಪುರಸ್ಕೃತರ ಮಾಡಿದ್ದಾರೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ‌ಕರ್ನಾಟಕ ಸರ್ಕಾರದಿಂದ ‘ಪರಿಸರ ರಾಯಭಾರಿ’ಯಾಗಿ ನೇಮಕಗೊಂಡರು. ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಗೌರವಿಸಬೆಕಾಗಿದೆ. ಅವರ ಹೆಸರಲ್ಲಿ ಪರಿಸರ ಉಳಿಸಿ, ಬೆಳೆಸಿ, ಸಂರಕ್ಷಣೆ ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು  ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರುಗಳಾದ ಸಂಜೀವ್ ನಾಯಕ್, ಗುರುರಾಜಪ್ಪ, ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಸಿ.ಅಣ್ಣಯ್ಯ, ಶ್ರೀನಿವಾಸಲು,   ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಾಣಿಗಾರಹಳ್ಳಿ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

15 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago