
ಹೊಸಕೋಟೆ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಂಡ ಮತ್ತು ಇಬ್ಬರು ಮಕ್ಕಳನ್ನ ಕೊಲೆ ಮಾಡಿ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಅದೃಷ್ಟವಶಾತ್ ತಾಯಿ ಪ್ರಾಣಾಪಪಾಯದಿಂದ ಪಾರಾಗಿ ಆಸ್ವತ್ರೆಗೆ ದಾಖಲಾಗಿದ್ದಾರೆ.
ಗಂಡ ಶಿವು (32) ಮಗಳು ಚಂದ್ರಕಲಾ (11) ಮಗ ಉದಯ್ ಸೂರ್ಯ (07) ಮೃತರು. ತಾಯಿ ಮಂಜುಳಾ ಪ್ರಾಣಾಪಾಯದಿಂದ ಪಾರು.
ಗಂಡ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಸಾಲ ಮಾಡಿಕೊಂಡಿದ್ದ ಕುಟುಂಬ. ಸಾಲ ಹೆಚ್ಚಾಗಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದ ದಂಪತಿ. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಅಂತ ಮಕ್ಕಳನ್ನು ಸಾಯಿಸುವ ನಿರ್ಧಾರ ಗಂಡ ಹೆಂಡತಿ ಮಾಡಿದ್ದರು. ಅದರಂತೆ ಮೊದಲಿಗೆ ಗಂಡ ಮತ್ತು ಮಕ್ಕಳ ಕುತ್ತಿಗೆಯನ್ನ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಪತ್ನಿ ಮಂಜುಳಾ.
ನಂತರ ಮಂಜುಳಾ ಹಗ್ಗದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನ ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಮಹಿಳೆಗೆ ಹೊಸಕೋಟೆ ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..