ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.
ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯು 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.
ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ. ಅತಿಯಾದ ಸಾಲ ಮಾಡಿಕೊಂಡಿದ್ದು, ಸಾಲ ಬಾಧೆ ತಾಳಲಾರದೆ ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮೃತ ಗಂಗರಾಜು ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…