97 ವರ್ಷದ ಪುಟ್ಟಮ್ಮ ಮತ್ತು 93 ವರ್ಷದ ನರಸಮ್ಮ ವೃದ್ಧ ಸಹೋದರಿಯರು ಒಂದೇ ದಿನದಲ್ಲಿ ನಿಧನ ಹೊಂದಿರುವ ಅಪರೂಪದ ಪ್ರಕರಣ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇ.30ರ ಮಂಗಳವಾರ ರಾತ್ರಿ ಗ್ರಾಮದ ಪುಟ್ಟಮ್ಮ (97) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ತಂಗಿ ನರಸಮ್ಮ ಮೇ.31ರ ಬುಧವಾರ ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ. ಮನೆಗೆ ಕರೆತರುವಷ್ಟರಲ್ಲಿ ನರಸಮ್ಮ (93) ಮೃತ ಪಟ್ಟಿದ್ದಾರೆ.
ತುಮಕೂರಿನ ವಾಮಚೇನಹಳ್ಳಿ ಪುಟ್ಟಮ್ಮ ಹಾಗೂ ನರಸಮ್ಮ ಅವರ ತವರು ಮನೆಯಾಗಿದ್ದು, ಅಕ್ಕ ತಂಗಿಯರನ್ನು ತಾಲ್ಲೂಕಿನ ಬಚ್ಚಹಳ್ಳಿಯ ಒಂದೇ ಕುಟುಂಬದ ಹನುಮಪ್ಪ ಹಾಗೂ ಕರೇಗೌಡ ಎನ್ನುವ ಅಣ್ಣ ತಮ್ಮಂದಿರಿಗೆ ಕೊಟ್ಟು ವಿವಾಹ ಮಾಡಲಾಗಿತ್ತು.
ಇಬ್ಬರೂ ತಮ್ಮ ಪತಿಯನ್ನು ಕಳೆದುಕೊಂಡಿದ್ದು, ಮಕ್ಕಳು, ಮಮ್ಮೊಕ್ಕಳೊಂದಿಗೆ ವಾಸವಾಗಿದ್ದರು. ಒಂದೇ ದಿನ ಕುಟುಂಬದ ಇಬ್ಬರು ಹಿರಿಯರನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ಸಂಜೆ ಇಬ್ಬರ ಅಂತ್ಯ ಸಂಸ್ಕಾರ ನಡೆಯಿತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…