ತಾಲೂಕಿನ ಸಾಸಲು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಚಂದ್ರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಾಸರಪಾಳ್ಯದ ರಾಮಯ್ಯ ಅವರನ್ನು ಸಂಘದ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದರು.
ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ನಾಗರಾಜು ಮಾತನಾಡಿ, ಅಧಿಕಾರ ಎಂದಿಗೂ ಶಾಶ್ವತವಲ್ಲ, ಎಷ್ಟು ದಿನಗಳ ಕಾಲ ಅಧಿಕಾರದಲ್ಲಿದ್ದೆ ಎನ್ನುವುದಕ್ಕಿಂತ ಮುಖ್ಯವಾಗಿ ಎಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುಂತೆ ನೂತನ ಅಧ್ಯಕ್ಷರಿಗೆ ಸೂಚಿಸಿದರು.
ನೂತನ ಅಧ್ಯಕ್ಷರಾಗಿ ರಾಮಯ್ಯ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿ, ಗ್ರಾಮದ ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ನನ್ನ ಅಧಿಕಾರವಧಿಯಲ್ಲಿ ಶಾಸಕ ವೆಂಕಟರಮಣ್ಯö, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೆಶಕ ಚುಂಚೇಗೌಡ ಮಾರ್ಗದರ್ಶನದಲ್ಲಿ ಸುಮಾರು ೧ ಕೋಟಿ ರೂ.ವರೆಗೆ ಸಾಲವನ್ನು ಅರ್ಹ ರೈತರಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಸಹಕಾರ ಸಂಘದಲ್ಲಿ ರೈತರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಮತ್ತೊಬ್ಬ ರೈತರು ಸಾಲವನ್ನು ಪಡೆಯಲು ಸಹಕರಿಸಬೇಕು. ಜತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಸಹಕಾರ ಸಂಘಗಳ ಚುನಾವಣೆಗೆ ಅವಿರೋಧ ಆಯ್ಕೆ ನಡೆಸುವ ಮೂಲಕ ರೈತ ಬೆವರಿನ ಶ್ರಮದ ಹಣವನ್ನು ವ್ಯರ್ಥ ಮಾಡಲು ಅವಕಾಶ ಕೊಡಬಾರದು ಎಂದು ಸಹಕಾರ ಸಂಘದ ನಿವೃತ್ತ ಅಧಿಕಾರಿ ಕೆಂಪೇಗೌಡ ಸಹಕಾರ ಸಂಘಗಳಿಗೆ ಮನವಿ ಮಾಡಿದರು.
ಈ ವೇಳೆ ಉಪಾಧ್ಯಕ್ಷ ಶಂಕರಪ್ಪ, ನಿರ್ದೆಶಕರಾದ ಚಂದ್ರಪ್ಪ, ಮುತ್ತುರಾಯಪ್ಪ, ಎ.ಸಿದ್ದಲಿಂಗಯ್ಯ, ಲಕ್ಷ್ಮೀನರಸಯ್ಯ, ಎಂ.ಎಚ್.ಮಂಜುನಾಥ, ಗಂಗಪ್ಪ, ವೆಂಕಟಲಕ್ಷ್ಮಮ್ಮ, ಮಂಜುಳಾ, ರಾಘವೇಂದ್ರ, ಗ್ರಾಮಸ್ಥರು ಇದ್ದರು.
ಕುಟುಂಬದ ಘರ್ಷಣೆಗಳು ಟಿವಿ ಮಾಧ್ಯಮಗಳಲ್ಲಿ ಪ್ರಚಾರವಾಗುವುದರಿಂದ ಪರಿಹಾರ ಸಾಧ್ಯವೇ. ಅವರಿಗೆ ಅಷ್ಟು ಜ್ಞಾನ ಮತ್ತು ಸಾಮರ್ಥ್ಯ ಇದೆಯೇ.... ಕೌಟುಂಬಿಕ ಸಮಸ್ಯೆಗಳಿಗೆ,…
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…