ಇಂದು ಮುಂಜಾನೆ ಸುಮಾರು 4ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕಾಡಲಪನಹಳ್ಳಿ, ಬೆನಕಿನಮಡಗು, ನಾಗಲಾಪುರದಲ್ಲಿ ಸುಮಾರು 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕಳ್ಳರು ಕದ್ದು ಟಾಟಾ ಏಸ್ ಗೆ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ರೈತರ ಕಣ್ಣಿಗೆ ಬಿದ್ದಿದ್ದಾರೆ. ರೈತರು ಕಳ್ಳರ ಸಮೀಪ ಬರುತ್ತಿದ್ದಂತೆ ಕಳ್ಳರು ಟಾಟಾ ಏಸ್ ವಾಹನವನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕದ್ದು ತುಂಬಿದ್ದ ಟಾಟಾ ಏಸ್ ನ್ನು ದೊಡ್ಡಬೆಳವಂಗಲ ಪೊಲೀಸರಿಗೆ ರೈತರು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳರು ಹೆಚ್ಚಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಖದೀಮರನ್ನು ಬಂಧಿಸಿ ರೈತರ ಆತಂಕವನ್ನು ದೂರಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸದ್ಯ ಕಳ್ಳನ ಮೊಬೈಲ್ ಪೊಲೀಸರ ವಶದಲ್ಲಿದ್ದು, ಕಳ್ಳ ತಪ್ಪಿಸಿಕೊಂಡಿದ್ದಾನೆ. ಎಸ್ಕೇಪ್ ಆಗಿರೋ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…