
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು ಕಡೆ ರೈತರ ಪಂಪ್ ಸೆಟ್ ಗಳ ವಿದ್ಯುತ್ ಕೇಬಲ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಸಾಸಲು ಹೋಬಳಿಯ ಶ್ರೀರಾಮನಹಳ್ಳಿ, ಲಕ್ಕೇನಹಳ್ಳಿ, ಮಚ್ಚೇನಹಳ್ಳಿ ಸೇರಿದಂತೆ ವಿವಿಧೆಡೆ ನೂರಾರು ಮೀಟರ್ ಕೇಬಲ್ ಗಳನ್ನು ಕಟ್ ಮಾಡಿ ಕಳವು ಆಗಿದೆ.

ಇದರಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಸಾಸಲು ಭಾಗದಲ್ಲಿ ಪದೇಪದೇ ಕೇಬಲ್ ಕಳವು ಪ್ರಕರಣಗಳು ಮರುಕಳಿಸುತ್ತಿವೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವ ಉಪಯೋಗವಾಗಿಲ್ಲ. ನಮಗೆ ನಷ್ಟದ ಜೊತೆಗೆ ಜೀವ ಭಯವೂ ಇದೆ. ಈ ಭಾಗ ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ…