ಕೋಲಾರ: ಜಿಲ್ಲೆಯಾದ್ಯಂತ ಯುವಕರ ತಂಡದೊಂದಿಗೆ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ತೊಡಗಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಪಕ್ಷದ ಪರಾಜಿತ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ವರಿಷ್ಠರಲ್ಲಿ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕಳೆದ 10 ವರ್ಷಗಳಿಂದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವುದರಲ್ಲಿ ಸಿಎಂಆರ್ ಶ್ರೀನಾಥ್ ಅವರ ಶ್ರಮ ಸಾಕಷ್ಟಿದೆ. ಇವರು ಯಾವುದೇ ಅಧಿಕಾರಕ್ಕೆ ಆಸೆ ಪಟ್ಟಿಲ್ಲ ಚುನಾವಣೆಯಲ್ಲಿ ಸೋತರು ಸಹ ಸಾಮಾನ್ಯ ಕಾರ್ಯಕರ್ತನಂತೆ ಜಿಲ್ಲೆಯಾದ್ಯಂತ ಸೇರಿದಂತೆ ರಾಜ್ಯದ ಉಪ ಚುನಾವಣೆಯಲ್ಲಿ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದಾರೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಚುನಾವಣೆ ಸೇರಿದಂತೆ ವಿವಿಧ ಸಹಕಾರಿ ಸಂಘಗಳ ಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ ಇಂತವರು ಪ್ರಸ್ತುತ ಸಂದರ್ಭದಲ್ಲಿ ಪಕ್ಷವನ್ನು ಮುನ್ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ, ಹಾಗೂ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗಾಗಿ ರಾಜ್ಯಾದ್ಯಂತ ಜೆಡಿಎಸ್ ಪಕ್ಷದ ಯುವ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಪಕ್ಷ ಅಂತಾ ಬಂದಾಗ ಯಾವುದೇ ಫಲಪೇಕ್ಷೇಗಳು ಇಲ್ಲದೇ ಇದ್ದರು ಪಕ್ಷಕ್ಕಾಗಿ ದುಡಿಯುವ ಯುವ ಪಡೆ ಇದ್ದು ಅಂತಹವರಿಗೆ ಅವಕಾಶ ಸಿಕ್ಕಾಗ ಮತ್ತಷ್ಟು ಕೆಲಸ ಮಾಡಲು ಸಾಧ್ಯವಾಗುತ್ತದೆ ಅ ನಿಟ್ಟಿನಲ್ಲಿ ವರಿಷ್ಠರು ಅಲೋಚಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಮುಳಬಾಗಿಲು ಮತ್ತು ಶ್ರೀನಿವಾಸಪುರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಶಾಸಕರು ಆಯ್ಕೆಯಾಗಿದ್ದಾರೆ ಜೊತೆಗೆ ಸಂಸದರು ಜೆಡಿಎಸ್ ಪಕ್ಷದವರು ಇದ್ದು ಮುಂಬರುವ ಎಲ್ಲಾ ಚುನಾವಣೆಗಳ ದೃಷ್ಟಿಯಿಂದ ಎಲ್ಲಾ ಜಾತಿ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವ ಕಾರ್ಯಕರ್ತರ ಕುಂದು ಕೊರತೆಗಳಿಗೆ ಸ್ಪಂಧಿಸುತ್ತಾ ಎಲ್ಲರ ವಿಶ್ವಾಸ ಗಳಿಸುವ ವ್ಯಕ್ತಿ ಸಿಎಂಆರ್ ಶ್ರೀನಾಥ್ ಮಾತ್ರ ಹೀಗಾಗಿ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.