Categories: ಕೋಲಾರ

ಸಿಎಂಆರ್ ಶ್ರೀನಾಥ್ ಅವರನ್ನು ಜೆಡಿಎಸ್‌ ಜಿಲ್ಲಾಧ್ಯಕ್ಷರನ್ನಾಗಿ ನೇಮಕಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯಾದ್ಯಂತ ಯುವಕರ ತಂಡದೊಂದಿಗೆ ಜೆಡಿಎಸ್‌ ಪಕ್ಷದ ಸಂಘಟನೆಯಲ್ಲಿ ತೊಡಗಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಪಕ್ಷದ ಪರಾಜಿತ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ವರಿಷ್ಠರಲ್ಲಿ ಜೆಡಿಎಸ್‌ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕಳೆದ 10 ವರ್ಷಗಳಿಂದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಜೆಡಿಎಸ್‌ ಪಕ್ಷವನ್ನು ಸಂಘಟಿಸುವುದರಲ್ಲಿ ಸಿಎಂಆರ್ ಶ್ರೀನಾಥ್ ಅವರ ಶ್ರಮ ಸಾಕಷ್ಟಿದೆ‌. ಇವರು ಯಾವುದೇ ಅಧಿಕಾರಕ್ಕೆ ಆಸೆ ಪಟ್ಟಿಲ್ಲ ಚುನಾವಣೆಯಲ್ಲಿ ಸೋತರು ಸಹ ಸಾಮಾನ್ಯ ಕಾರ್ಯಕರ್ತನಂತೆ ಜಿಲ್ಲೆಯಾದ್ಯಂತ ಸೇರಿದಂತೆ ರಾಜ್ಯದ ಉಪ ಚುನಾವಣೆಯಲ್ಲಿ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದಾರೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಚುನಾವಣೆ ಸೇರಿದಂತೆ ವಿವಿಧ ಸಹಕಾರಿ ಸಂಘಗಳ ಚುನಾವಣೆಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ ಇಂತವರು ಪ್ರಸ್ತುತ ಸಂದರ್ಭದಲ್ಲಿ ಪಕ್ಷವನ್ನು ಮುನ್ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಜೆಡಿಎಸ್‌ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ‌ ಎಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ, ಹಾಗೂ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗಾಗಿ ರಾಜ್ಯಾದ್ಯಂತ ಜೆಡಿಎಸ್ ಪಕ್ಷದ ಯುವ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಪಕ್ಷ ಅಂತಾ ಬಂದಾಗ ಯಾವುದೇ ಫಲಪೇಕ್ಷೇಗಳು ಇಲ್ಲದೇ ಇದ್ದರು ಪಕ್ಷಕ್ಕಾಗಿ ದುಡಿಯುವ ಯುವ ಪಡೆ ಇದ್ದು ಅಂತಹವರಿಗೆ ಅವಕಾಶ ಸಿಕ್ಕಾಗ ಮತ್ತಷ್ಟು ಕೆಲಸ ಮಾಡಲು ಸಾಧ್ಯವಾಗುತ್ತದೆ ಅ ನಿಟ್ಟಿನಲ್ಲಿ ವರಿಷ್ಠರು ಅಲೋಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಮುಳಬಾಗಿಲು ಮತ್ತು ಶ್ರೀನಿವಾಸಪುರ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷದ ಶಾಸಕರು ಆಯ್ಕೆಯಾಗಿದ್ದಾರೆ ಜೊತೆಗೆ ಸಂಸದರು ಜೆಡಿಎಸ್‌ ಪಕ್ಷದವರು ಇದ್ದು ಮುಂಬರುವ ಎಲ್ಲಾ ಚುನಾವಣೆಗಳ ದೃಷ್ಟಿಯಿಂದ ಎಲ್ಲಾ ಜಾತಿ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವ ಕಾರ್ಯಕರ್ತರ ಕುಂದು ಕೊರತೆಗಳಿಗೆ ಸ್ಪಂಧಿಸುತ್ತಾ ಎಲ್ಲರ ವಿಶ್ವಾಸ ಗಳಿಸುವ ವ್ಯಕ್ತಿ ಸಿಎಂಆರ್ ಶ್ರೀನಾಥ್ ಮಾತ್ರ ಹೀಗಾಗಿ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

4 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

24 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago