ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಮಂಡಿಯಲ್ಲಿ ಶ್ರೀರಾಮೋತ್ಸವ

ಕೋಲಾರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಗರದ ಸಿಎಂಆರ್ ಟಮೋಟ ಮಂಡಿಯಲ್ಲಿ ಸೋಮವಾರ ಶ್ರೀರಾಮನಿಗೆ ವಿಶೇಷ ಪೂಜೆಯೊಂದಿಗೆ ಮಜ್ಜಿಗೆ, ಪಾನಕ, ಕೊಸಂಬಿ, ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಈಡೀ ದೇಶದ ರಾಮ ಭಕ್ರದಲ್ಲಿ ಸಂಭ್ರಮ ಮಾಡಿದೆ, ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜೆಗಳನ್ನು ನಡೆಯುತ್ತಿವೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ. ದೇಶದ ಪ್ರಧಾನಿಯೊಂದಿಗೆ ನಾವು ಎಲ್ಲರೂ ಶ್ರೀರಾಮ ಮಂದಿರ ಉದ್ಘಾಟನೆಗೆ ಸಾಕ್ಷಿಯಾಗಿದ್ದು ಹೆಮ್ಮೆಯಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬರಲ್ಲೂ ರಾಮನ ಸಂಭ್ರಮವು ಮನೆ ಮಾಡಿದೆ, ಈ ಸಂಭ್ರಮವನ್ನು ಕೋಟ್ಯಾಂತರ ಜನರು ಟಿವಿಯ ಮೂಲಕ ವೀಕ್ಷಣೆ ಮಾಡುತ್ತಿದ್ದು, ಸಾವಿರಾರು ಜನರು ಅಯೋಧ್ಯೆಗೆ ಹೋಗಿದ್ದಾರೆ. ನಗರದ ಹಲವೆಡೆಗಳಲ್ಲಿ ಎಲ್ಇಡಿ ಸ್ಕ್ರೀನ್ ಹಾಕಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಈ ಸಾಧನೆಗೆ ಕಾರಣವಾದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಯುವ ಮುಖಂಡ ಸಿಎಂಆರ್ ಹರೀಶ್, ಕೋಲಾರ- ಚಿಕ್ಕಬಳ್ಳಾಪುರ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಬಲಿಜ ಸಂಘದ ಮುಖಂಡ ತೋಟಗಳ ಅಶೋಕ್, ರೋಟರಿ ಸುಧಾಕರ್ ಸೇರಿದಂತೆ ಜೆಡಿಎಸ್‌ ಮುಖಂಡರು ಕಾರ್ಯಕರ್ತರು, ಸಿಎಂಆರ್ ಮಂಡಿ ಸಿಬ್ಬಂದಿ ವರ್ಗ ಇದ್ದರು

Leave a Reply

Your email address will not be published. Required fields are marked *