ಕೋಲಾರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಗರದ ಸಿಎಂಆರ್ ಟಮೋಟ ಮಂಡಿಯಲ್ಲಿ ಸೋಮವಾರ ಶ್ರೀರಾಮನಿಗೆ ವಿಶೇಷ ಪೂಜೆಯೊಂದಿಗೆ ಮಜ್ಜಿಗೆ, ಪಾನಕ, ಕೊಸಂಬಿ, ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಈಡೀ ದೇಶದ ರಾಮ ಭಕ್ರದಲ್ಲಿ ಸಂಭ್ರಮ ಮಾಡಿದೆ, ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜೆಗಳನ್ನು ನಡೆಯುತ್ತಿವೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ. ದೇಶದ ಪ್ರಧಾನಿಯೊಂದಿಗೆ ನಾವು ಎಲ್ಲರೂ ಶ್ರೀರಾಮ ಮಂದಿರ ಉದ್ಘಾಟನೆಗೆ ಸಾಕ್ಷಿಯಾಗಿದ್ದು ಹೆಮ್ಮೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಸಿಎಂಆರ್ ಹರೀಶ್, ಕೋಲಾರ- ಚಿಕ್ಕಬಳ್ಳಾಪುರ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಬಲಿಜ ಸಂಘದ ಮುಖಂಡ ತೋಟಗಳ ಅಶೋಕ್, ರೋಟರಿ ಸುಧಾಕರ್ ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು, ಸಿಎಂಆರ್ ಮಂಡಿ ಸಿಬ್ಬಂದಿ ವರ್ಗ ಇದ್ದರು
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…