ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ ಹೆಚ್ಚು ಕಾಳಜಿ ಹೊಂದಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ಆರೋಪಿಸಿದರು.
ನಗರದಲ್ಲಿ ಗುರುವಾರ ನಡೆದ ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ–ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಹೋರಾಡಲು ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಪಕ್ಷದ ಹಿರಿಯ ನಾಯಕರ ನಿರ್ಧಾರದಂತೆ ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿವೆ ಎಂದರು.
ರಾಜ್ಯದ ಪ್ರಬುದ್ಧ ಮತದಾರರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ ಅವರು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಎರಡೂ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಎಲ್ಲ ಹಂತದಲ್ಲೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಳಮಟ್ಟದಿಂದಲೇ ಬಿಜೆಪಿ–ಜೆಡಿಎಸ್ ಸ್ವಾಭಾವಿಕ ಮೈತ್ರಿ ರೂಪುಗೊಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಮೈತ್ರಿಗೆ ಅಗ್ನಿಪರೀಕ್ಷೆಯಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡುತ್ತಿರುವ ಹೇಳಿಕೆಗಳನ್ನು ಸಾರ್ವಜನಿಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಕಾಂಗ್ರೆಸ್ ವಿರುದ್ಧದ ಹೋರಾಟದ ಭಾಗವಾಗಿದೆ. ರಾಜ್ಯದಿಂದ ಬೂತ್ ಮಟ್ಟದವರೆಗೆ ಎರಡೂ ಪಕ್ಷಗಳ ನಾಯಕರ ಮನಸ್ಸು ಒಂದಾಗಬೇಕು ಎಂದು ಹೇಳಿದರು.
ಕುಮಾರಸ್ವಾಮಿಯವರಿಂದ ಬೆಳೆದ ವ್ಯಕ್ತಿ ಪುಟ್ಟಣ್ಣ ಅವರು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನಿಖಿಲ್, ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಬಾರಿ ಮತದಾರರು ದುರಾಡಳಿತಕ್ಕೆ ಅಂತ್ಯ ಹಾಡಲಿದ್ದಾರೆ ಎಂದರು.
ಎನ್‌ಡಿಎ ಅಭ್ಯರ್ಥಿ ರಂಗನಾಥ ಮಾತನಾಡಿ, ಕಾಂಗ್ರೆಸ್‌ಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ. ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅಪಾರ ಕೊಡುಗೆ ನೀಡಿದ್ದಾರೆ. ಪುಟ್ಟಣ್ಣ ಅವರು ಕಳೆದ ಬಾರಿ 15 ದಿನಗಳಲ್ಲಿ ಒಪಿಎಸ್ ಜಾರಿ ಹಾಗೂ ಆರೋಗ್ಯ ವಿಮೆ ಕಲ್ಪಿಸುವುದಾಗಿ ಭರವಸೆ ನೀಡಿದ್ದರೂ ಮಾತು ತಪ್ಪಿದ್ದಾರೆ ಎಂದು ಆರೋಪಿಸಿದರು.
ಪ್ರಸ್ತುತ ಶಿಕ್ಷಕರಿಗೆ ಬೋಧನೆಯ ಜೊತೆಗೆ ಎಸ್‌ಐಆರ್, ಜನಗಣತಿ ಸೇರಿದಂತೆ ಹಲವು ಹೆಚ್ಚುವರಿ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ. ಇದರಿಂದ ಶಿಕ್ಷಕರ ಪರಿಸ್ಥಿತಿ ಹೇಳತೀರದಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದರು.
ಬಿಜೆಪಿ ಉಸ್ತುವಾರಿ ಗೋಪಿನಾಥ ರೆಡ್ಡಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ಬಿಜೆಪಿ–ಜೆಡಿಎಸ್ ಒಗ್ಗಟ್ಟಿನ ಹೋರಾಟ ನಡೆಸಬೇಕಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆ 2028ರ ವಿಧಾನಸಭಾ ಚುನಾವಣೆಗೆ ಜಯದ ಮೆಟ್ಟಿಲಾಗಲಿದೆ. ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಗೆಲುವು ಸುಲಭವಾಗಲಿದೆ ಎಂದರು.
ಸಭೆಯಲ್ಲಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸಮೂರ್ತಿ, ಚಂದ್ರಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ, ನಾಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…
ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…
ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯಾಗಿ ರೂಪಿಸುವುದರ ಜೊತೆಗೆ, ಪರಿಷತ್ತಿಗೆ ಕಾಯಕಲ್ಪ ನೀಡುವ ಉದ್ದೇಶ ಹೊಂದಲಾಗಿದೆ…