ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಗಳನ್ನು ಯಾಮಾರಿಸಿರುವ ಆರೋಪ ಕೇಳಿಬಂದಿದೆ.
ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ, ಕುಡಿಯುವ ನೀರು ಸೇರಿದಂತೆ ಗ್ರಾಮದ ಇನ್ನು ಹಲವಾರು ಸಮಸ್ಯೆಗಳ ಕುರಿತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.
ಕೂಡಲೇ ಎಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಆದರೆ ಪಂಚಾಯ್ತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಎರಡು ತಿಂಗಳ ಹಿಂದೆಯೆ ನೀರಿನ ಸಮಸ್ಯೆ ಬಗೆಹರಿಸಿದ್ದೇವೆ. ಗ್ರಾಮದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರದಿ ನೀಡಿ ಕ್ಲೀನ್ ಚಿಟ್ ನೀಡಿ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ ಅಧಿಕಾರಿಗಳನ್ನೇ ಯಾಮರಿಸಿದ್ದಾರೆ ಎಂದು ಗ್ರಾಮಸ್ತರು ಆರೋಪ ಮಾಡಿದ್ದಾರೆ.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…