ಸಿಎಂ ಕಚೇರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಯಾಮಾರಿಸಿದ ಹಾಡೋನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ…?

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಗಳನ್ನು ಯಾಮಾರಿಸಿರುವ ಆರೋಪ ಕೇಳಿಬಂದಿದೆ.

ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ, ಕುಡಿಯುವ ನೀರು ಸೇರಿದಂತೆ ಗ್ರಾಮದ ಇನ್ನು ಹಲವಾರು ಸಮಸ್ಯೆಗಳ ಕುರಿತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.

ಕೂಡಲೇ ಎಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಆದರೆ ಪಂಚಾಯ್ತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಎರಡು ತಿಂಗಳ ಹಿಂದೆಯೆ ನೀರಿನ ಸಮಸ್ಯೆ ಬಗೆಹರಿಸಿದ್ದೇವೆ. ಗ್ರಾಮದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರದಿ ನೀಡಿ ಕ್ಲೀನ್ ಚಿಟ್ ನೀಡಿ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ ಅಧಿಕಾರಿಗಳನ್ನೇ ಯಾಮರಿಸಿದ್ದಾರೆ ಎಂದು ಗ್ರಾಮಸ್ತರು ಆರೋಪ ಮಾಡಿದ್ದಾರೆ.

ಗ್ರಾಮಸ್ಥ ಹರ್ಷ “ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿ, ನಮ್ಮ ಗ್ರಾಮದಲ್ಲಿ ಹಲವಾರು ಸಮಸ್ಯೆಗಳಿವೆ. ಕಳೆದ ಎರಡು ತಿಂಗಳಿನಿಂದ ಗ್ರಾಮದ ಸಮಸ್ಯೆಗಳನ್ನು ಇ-ಮೇಲ್ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದೆವು. ಆದರೆ, ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸದೇ ಎಂದು ಸುಳ್ಳು ಮಾಹಿತಿ ನೀಡಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು …

 

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

5 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

18 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

19 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

21 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

22 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

24 hours ago