ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ ತೆರೆ: ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಫಿಕ್ಸ್

ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ಡಿಕೆಶಿಗೆ ಡಿಸಿಎಂ ಸ್ಥಾನ ಫೈನಲ್ ಮಾಡಿ ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ‌ ತೆರೆ ಎಳೆದ ‘ಕೈ’ ಹೈಕಮಾಂಡ್.

2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ.13ರಂದು ಹೊರಬಿದ್ದಿತು. ಈ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ಬಹುಮತ ಪಡೆದು ಗೆದ್ದು ಸರ್ಕಾರ ರಚನೆ ಮಾಡಲು ಮುಂದಾಗಿದೆ. ಫಲಿತಾಂಶ ಬಂದು 6 ದಿನಗಳು ಕಳೆದರೂ ಸಿಎಂ ಕುರ್ಚಿಗಾಗಿ ಪೈಪೋಟಿ ಮುಂದುವರೆಯಿತು. ಆದರೆ ಇಂದು ಈ ಹಗ್ಗಾಜಗ್ಗಾಟಕ್ಕೆ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ.

ವಿರೋಧ ಪಕ್ಷಗಳು, ಜನರ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಡವಳಿಕೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ದೆಹಲಿ ಹಾಗೂ ರಾಜ್ಯದಲ್ಲಿ ಹೈಕಮಾಂಡ್ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಇಬ್ಬರಿಗೂ ಮನವೊಲಿಸಿ ಸಿದ್ದರಾಮಯ್ಯಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟು ಸಮಾಧಾನ ಮಾಡಿದ್ದಾರೆ.

ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯನವರು ಮೇ.20ರ ಶನಿವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ.20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದೆ ಅದಕ್ಕೆ ಸಕಲ ಸಿದ್ಧತೆ ಆರಂಭವಾಗಿದೆ.

ನೂತನ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

Leave a Reply

Your email address will not be published. Required fields are marked *