ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ಡಿಕೆಶಿಗೆ ಡಿಸಿಎಂ ಸ್ಥಾನ ಫೈನಲ್ ಮಾಡಿ ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ ತೆರೆ ಎಳೆದ ‘ಕೈ’ ಹೈಕಮಾಂಡ್.
2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ.13ರಂದು ಹೊರಬಿದ್ದಿತು. ಈ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ಬಹುಮತ ಪಡೆದು ಗೆದ್ದು ಸರ್ಕಾರ ರಚನೆ ಮಾಡಲು ಮುಂದಾಗಿದೆ. ಫಲಿತಾಂಶ ಬಂದು 6 ದಿನಗಳು ಕಳೆದರೂ ಸಿಎಂ ಕುರ್ಚಿಗಾಗಿ ಪೈಪೋಟಿ ಮುಂದುವರೆಯಿತು. ಆದರೆ ಇಂದು ಈ ಹಗ್ಗಾಜಗ್ಗಾಟಕ್ಕೆ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ.
ವಿರೋಧ ಪಕ್ಷಗಳು, ಜನರ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಡವಳಿಕೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ದೆಹಲಿ ಹಾಗೂ ರಾಜ್ಯದಲ್ಲಿ ಹೈಕಮಾಂಡ್ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಇಬ್ಬರಿಗೂ ಮನವೊಲಿಸಿ ಸಿದ್ದರಾಮಯ್ಯಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟು ಸಮಾಧಾನ ಮಾಡಿದ್ದಾರೆ.
ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ನೂತನ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…