ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು ಗೋಚರಿಸುತ್ತಿವೆ. ಹಿರಿಯ ಸಚಿವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಖುರ್ಚಿ ಕದನಕ್ಕೆ ಬ್ರೇಕ್ ಬೀಳುವ ಸೂಚನೆಗಳು ಕಾಣಿಸುತ್ತಿವೆ.

ದೇವನಹಳ್ಳಿ ಪಟ್ಟಣದಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಸಿಎಂ ಖುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ಸಿಎಂ ಕುರ್ಚಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ, ಇದೇ ವೇಳೆ ಸಂಪುಟ ಪುನರ್‌ರಚನೆ ಕುರಿತಾದ ಚರ್ಚೆಯೂ ಅಂತಿಮ ಹಂತದಲ್ಲಿದ್ದು, ಅದರ ಬಗ್ಗೆಯೂ ಹೈಕಮಾಂಡ್ ಮಟ್ಟದಲ್ಲಿ ನಿರ್ಧಾರವಾಗಲಿದೆ. ಮುಂದಿನ 15 ರಿಂದ 20 ದಿನಗಳೊಳಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ಹೇಳಿದರು.

ಮುಂದಿನ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಲಿರುವ ಹಿನ್ನೆಲೆ, ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇತ್ತ ತೆರೆಮರೆಯಲ್ಲಿ ಸಿಎಂ ಕುರ್ಚಿ ವಿವಾದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಕಾಂಗ್ರೆಸ್ ನಾಯಕತ್ವ ತೀವ್ರ ಚಟುವಟಿಕೆ ನಡೆಸುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಸಚಿವ ಮುನಿಯಪ್ಪ ಅವರ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಮುನ್ಸೂಚನೆಯೇ ಎಂಬ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

11 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

14 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

17 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

19 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

20 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago