ಸಿಎಂ ಕುರ್ಚಿ ಕದನ ವಿಚಾರ: ‘ನಾಕೊಡೆ ನಿ ಬಿಡೆ’ ಕಪ್ಪಕಾಣಿಕೆಗಾಗಿ ಹೈಕಮಾಂಡ್ ಆಟ- ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಗೊಂದಲಕ್ಕೆ ಹೈಕಮಾಂಡೇ ನೇರ ಕಾರಣ ಎಂದು ಆರೋಪಿಸಿದರು. “ಕಪ್ಪಕಾಣಿಕೆಗಾಗಿ ಹೈಕಮಾಂಡ್ ಈ ಎಲ್ಲ ಆಟಗಳನ್ನು ಆಡಿಸುತ್ತಿದೆ. ನಾಕೊಡೆ ನಿ ಬಿಡೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಇದಕ್ಕೆಲ್ಲ ಕಾರಣ ಹೈಕಮಾಂಡ್” ಎಂದು ಕಿಡಿಕಾರಿದರು.

ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಒಪ್ಪಂದ ಆಗಿತ್ತಾ ಇಲ್ಲವಾ ಎಂಬುದರ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ಈ ಕಡೆ ಇವರನ್ನು ಛೂ ಬಿಡ್ತಾರೆ, ಆ ಕಡೆ ಅವರನ್ನ ಛೂ ಬಿಡ್ತಾರೆ. ಎರಡೂ ಕಡೆಯಿಂದ ಬಂಡವಾಳ ಮಾಡಿಕೊಳ್ಳಲಾಗುತ್ತಿದೆ” ಎಂದು ಹೇಳಿದರು.

ಚುನಾವಣೆ ನಡೆಸಬೇಕು ಅಲ್ವಾ? ಯಾರು ಹೆಚ್ಚು ಕೊಡ್ತಾರೋ ಅವರು ಸಿಎಂ ಆಗ್ತಾರೆ, ಇವರು ಜ್ಯಾಸ್ತಿ ಕೊಟ್ಟರೆ ಇವರು ಆಗ್ತಾರೆ ಎಂಬಂತೆ ಹೈಕಮಾಂಡ್ ಎತ್ತಿಕಟ್ಟುತ್ತಿದೆ ಎಂದು ಆರೋಪಿಸಿದರು.

“ಇಬ್ಬರು ನಾಯಕರ ಜಗಳದಲ್ಲಿ ಇಡೀ ರಾಜ್ಯ ಹಾಳಾಗ್ತಿದೆ. ಹೋದ್ಯಾ ಪಿಶಾಚಿ ಅಂದ್ರೆ ಬಂದ್ಯಾ ಗಭಾಷಿಯಲ್ಲಿ ಅನ್ನೋ ತರ ಆಗಿದೆ” ಎಂದು ವ್ಯಂಗ್ಯವಾಡಿದರು.

ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಮಾಡಿದೆ ಎಂದು ಆರೋಪ ಮಾಡುತ್ತಾರೆ. ನಮಗೂ ಅದಕ್ಕೂ ಸಂಬಂಧವಿಲ್ಲ. ಒಂದು ಕಮಿಟಿ ರಚನೆ ಆಗಿದೆ. ಕಮಿಟಿ ಮತ್ತು ರಾಜ್ಯ ಸರಕಾರಕ್ಕೆ ಸಂಬಂಧಿಸಿದ ವಿಚಾರ. ಅವರಿಬ್ಬರು ಮಾತನಾಡಿಕೊಂಡು ಮಾಡಬೇಕು. ಕಮಿಟಿ ಅವರು ಮಾಡಿದ್ದಾರೆ ಎಂದು ತಪ್ಪಿಸಿಕೊಳ್ಳಲು ಮುಂದಾಗುತ್ತಾರೆ. ಮೆಟ್ರೋ ಲಾಸ್ ನಲ್ಲಿ ಇಲ್ಲ. ನಿಮ್ ಖಜಾನೆ ಖಾಲಿ ಆಗಿದೆ. ಎಲ್ಲಾ ಕಡೆಯಿಂದಲೂ ಹೇಗಾದ್ರು ಮಾಡಿ ತುಂಬಿಕೊಳ್ಳಬೇಕು. ಕಾಂಗ್ರೆಸ್ ಗೆ ಎಟಿಎಂ ಇರುವುದು ಕರ್ನಾಟಕದಲ್ಲೇ. ಕೇರಳ, ಪಚ್ಚಿಮ ಬಂಗಾಳ, ತಮಿಳುನಾಡಿಗೆ ದುಡ್ಡು ಕೊಡಬೇಕು. ಆದ್ದರಿಂದ  ಕಡೆಯಲ್ಲೂ ಕೈ ಆಡಿಸುತ್ತಿದ್ದಾರೆ ಎಂದು ಹೇಳಿದರು..

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

3 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

6 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

8 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

21 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

23 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago