Categories: ಕೋಲಾರ

ಸಿಎಂ ಕುರ್ಚಿ ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯ ಮಾತು ಎಲ್ಲಿಂದ ಬರುತ್ತೇ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸಧ್ಯಕ್ಕೆ ಖಾಲಿ ಇಲ್ಲ ಬದಲಾವಣೆಗೆ ಪ್ರಶ್ನೆ ಎಲ್ಲಿಂದ ಬರುತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದ್ದಾರೆ ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಅವರು ಇವರು ಹೇಳುವ ಮಾತುಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬದಲಾವಣೆ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ ಸರಕಾರದ ಮಟ್ಟದಲ್ಲಿ ಏನಾದರೂ ಚರ್ಚೆ ಮಾಡಿದ್ದರಾ ಇಲ್ಲವೇ ಇಲ್ಲ ವಿರೋಧ ಪಕ್ಷಗಳ ಊಹಾಪೋಹಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಆಸೆ ಪಟ್ಟಿದ್ದಾರೆ ಎಂಬುದಕ್ಕೆ ಉತ್ತರಿಸಿ ಮುಂದಕ್ಕೆ ಏನಾದರೂ ಸಿಗಬಹುದು ಅಂತ ಕೆಲವರು ಈಗಿನಿಂದಲೂ ಕಲ್ಲು ಹಾಕಲು ಹೊರಟಿರಬಹುದು ಆಸೆಗಾಗಿ ಮಾತಾಡಿದ್ದಾರೆ ಹಾಗೇನಾದರೂ ಇದ್ದಲ್ಲಿ ನನ್ನನ್ನು ಯಾರಾದರೂ ಕೇಳತ್ತಾ ಇದ್ದರೂ ನಮಗೂ ಬೆಂಬಲ ಕೊಡಿ ಅಂತ ಇದುವರೆಗೂ ಅಂತಹ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಉತ್ತರ ಕರ್ನಾಟಕಕ್ಕೆ ಬೆಳಗಾವಿ ಭಾಗಕ್ಕೆ ಕೇಳತ್ತಾರೆ ಆದರೆ ಕೋಲಾರಕ್ಕೂ ಕೊಡಲಿ ಬಿಡಿ ಬೆಂಗಳೂರಿಗೆ ಹತ್ತಿರವಾಗುತ್ತದೆ ಮೊದಲ ಸಿಎಂ ಕೋಲಾರದಿಂದ ಆಗಿರೋದು ಕೇಳೋದು ತಪ್ಪಿಲ್ಲ ಕೋಲಾರ ಅಭಿವೃದ್ಧಿಗೆ ಮಂತ್ರಯಾಗಲಿ ಶಾಸಕರಾಗಲಿ ಮಾಡೇ ಮಾಡತ್ತೇವೆ ಜನ ಮಾತಾಡಲಿಕ್ಕೆ ಉತ್ತರ ಕೊಡಲ್ಲ ಮುಂದೆ ಎರಡು ತಿಂಗಳಲ್ಲಿ ನೀವೇ ಹೇಳತ್ತೀರ ಅಭಿವೃದ್ಧಿ ವಿಚಾರವನ್ನು ಎಂದು ಉತ್ತರಿಸಿದರು.

ಮುಡಾ ಹಗರಣದ ಬಗ್ಗೆ ಕಾಂಗ್ರೆಸ್ ಪಕ್ಷವೇ ತನಿಖೆಗೆ ಒತ್ತಾಯಿಸಿದೆ ಮೊದಲು ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಯಲಿ ಅಂತ ಆದರೆ ಯಾರೋ ಒಬ್ಬ ವ್ಯಕ್ತಿ ಅರ್ಜಿ ಕೊಟ್ಟ ಮಾತ್ರಕ್ಕೆ ರಾಜ್ಯಪಾಲರು ನೋಟೀಸ್ ನೀಡಿದ್ದಾರೆ ಅಷ್ಟೇ ಅದಕ್ಕೆ ಎಲ್ಲಾ ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಪಕ್ಷದಲ್ಲಿ ಇದರ ಬಗ್ಗೆ ತೀರ್ಮಾನ ಇಲ್ಲ ಅಂತಹ ಸಂದರ್ಭ ಬಂದರೆ ಯಾರಿಗೆ ಕೊಡಬೇಕು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು ನಾನು ಅಂತೂ ಆಕಾಂಕ್ಷಿಯಲ್ಲ ಎಂದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ 2027 ಕ್ಕೆ ಎತ್ತಿನ ಹೊಳೆ ಯೋಜನೆಯಿಂದ ನೀರು ಬರಲಿದೆ ಈಗಾಗಲೇ ಯೋಜನೆಯ ಪ್ರಾರಂಭವಾಗಿ ನೀರು ಹರಿಸಲಾಗುತ್ತಾ ಇದ್ದು ನಮಗೆ 24 ಟಿಎಂಸಿ ನೀರು ಬರಲಿದೆ ಅದರಲ್ಲಿ 9 ಟಿಎಂಸಿ ನೀರು ಕೆರೆಗಳಿಗೆ ತುಂಬಿಸಲಾಗುತ್ತದೆ ಅಲ್ಲಿ ತನಕ ಬೇಸರ ಇದ್ದೇ ಇರುತ್ತದೆ ಅರಣ್ಯ ಇಲಾಖೆಯು ಪರಿಸರ ನಾಶದ ಬಗ್ಗೆ ದೂರಗಳು ಇವೆ ಇದಕ್ಕೆ ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ ಮುಂದೆ ಎಲ್ಲವೂ ಸರಿ ಹೋಗುತ್ತದೆ ಎಂದರು.

Ramesh Babu

Journalist

Recent Posts

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

2 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

5 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

17 hours ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

17 hours ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

20 hours ago

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…

20 hours ago