ಸಿಎಂ, ಡಿಸಿಎಂ ವಿರುದ್ಧ ಅವಹೇಳನ; ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

ಕೋಲಾರ: ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ಬಿ ನಿಖಿಲ್ ಅವರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನಗಳಿಂದ ವಿನಾಕಾರಣ ಸಿಎಂ.ಡಿಸಿಎಂ ದಲಿತ ಸಚಿವರು ಸೇರಿದಂತೆ ಪಕ್ಷದ ನಾಯಕರು ಮುಖಂಡರ ವಿರುದ್ದ ಅಸಭ್ಯವಾಗಿ ವರ್ತಿಸುವವರ ಸಂಖ್ಯೆ ಜಾಸ್ತಿಯಾಗಿದೆ ಇತ್ತೀಚೆಗೆ ಮೋಹಿತ್ ನರಸಿಂಹಮೂರ್ತಿಯ ಉದ್ದಟನವು ಜಾಸ್ತಿಯಾಗಿದ್ದು ಕೂಡಲೇ ಕ್ರಮ ವಹಿಸುವಂತೆ ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ವಿರುದ್ದವೇ ಹೀನಾಯವಾಗಿ ಏಕವಚನದಲ್ಲಿ ಸಂಭೋದಿಸಿ ಬೈಯ್ಯುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಹರಿದು ಬಿಟ್ಟು ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾನೆ ಸಮಾಜದಲ್ಲಿ ಈ ಪ್ರಕರಣದಿಂದ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು ಕಾಂಗ್ರೆಸ್ ಪಕ್ಷದಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯುವುದಕ್ಕೂ ಮೊದಲೇ ಈತನ ಮೇಲೆ ಸೂಕ್ತ ಕ್ರಮಕೈಗೊಂಡು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು ಈ ದಿಕ್ಕಿನಲ್ಲಿ ತಾವುಗಳು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಬಿ ನಿಖಿಲ್, ಈ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ಸಂಬಂಧಿಸಿದ ಜಿಲ್ಲೆಯವರ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಪದವೀಧರ ಘಟಕದ ಅಧ್ಯಕ್ಷ ಸುಧೀರ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಒಬಿಸಿ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ನಾಗರಾಜಗೌಡ, ಪರ್ವೇಜ್, ರಾಮಯ್ಯ, ಹರೀಷ್, ಎನ್.ಟಿ.ಆರ್ ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

4 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

11 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

12 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

18 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago