ಬೆಂಗಳೂರಿನಿಂದ ಕುಟುಂಬ ಸಮೇತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರ ಕಾರನ್ನು ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆಯನ್ನ ಪೊಲೀಸರು ನಡೆಸಿದ್ದಾರೆ.
ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ, ಚುನಾವಣೆ ಹಿನ್ನೆಲೆ ಅಕ್ರಮ ಹಣಕಾಸು ಮತ್ತು ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ 6 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ. ವಾಹನಗಳ ತಪಾಸಣೆ ವೇಳೆ ಮುಖ್ಯಮಂತ್ರಿಗಳೆಂಬ ಕಾರಣಕ್ಕೆ ವಿನಾಯಿತಿ ನೀಡದ ಪೊಲೀಸರು ಅವರ ಕಾರನ್ನು ತಪಾಸಣೆ ಮಾಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ತಪಾಸಣೆ ವೇಳೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ನಾಗರಾಜು ಸೇರಿದಂತೆ ಚುನಾವಣಾ ಸಿಬ್ಬಂದಿ ಹಾಜರಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…