ಸಿಎಂ ಬೊಮ್ಮಾಯಿ ಅವರ ಕಾರು ತಡೆದು ತಪಾಸಣೆ: ತಾಲೂಕಿನ ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳಿಂದ ತಪಾಸಣೆ

ಬೆಂಗಳೂರಿನಿಂದ ಕುಟುಂಬ‌ ಸಮೇತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರ ಕಾರನ್ನು ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆಯನ್ನ ಪೊಲೀಸರು ನಡೆಸಿದ್ದಾರೆ.

ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ, ಚುನಾವಣೆ ಹಿನ್ನೆಲೆ ಅಕ್ರಮ ಹಣಕಾಸು ಮತ್ತು ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ 6 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ. ವಾಹನಗಳ ತಪಾಸಣೆ ವೇಳೆ ಮುಖ್ಯಮಂತ್ರಿಗಳೆಂಬ ಕಾರಣಕ್ಕೆ ವಿನಾಯಿತಿ ನೀಡದ ಪೊಲೀಸರು ಅವರ ಕಾರನ್ನು ತಪಾಸಣೆ ಮಾಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತಪಾಸಣೆ ವೇಳೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ನಾಗರಾಜು ಸೇರಿದಂತೆ ಚುನಾವಣಾ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 minutes ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

14 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

19 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

23 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago