ಸಿಎಂ- ಯತೀಂದ್ರ ನಡುವಿನ ಸಂಭಾಷಣೆ: ಕುಮಾರಸ್ವಾಮಿ ವಿಕೃತ ಮನಸ್ಥಿತಿ ಪ್ರದರ್ಶನ- ದೇವೇಗೌಡರಾದರೂ ಮಗನಿಗೆ ಬುದ್ಧಿ ಹೇಳಬೇಕು- ಸಿದ್ದರಾಮಯ್ಯ ವಾಗ್ದಾಳಿ

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ.ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶವ್ಯಕ್ಯಪಡಿಸಿದ್ದಾರೆ.

ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

4 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

9 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

15 hours ago