ಕೋಲಾರ: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು ಸತ್ಯಕ್ಕೆ ಜಯವಾಗಿದ್ದು ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹವಾಗಿದ್ದು ನಾನು ಬಡವರ ಪರವಾಗಿದ್ದೇವೆ ಎಂದು ಹೇಳುವ ಸಿದ್ದರಾಮಯ್ಯ ಅವರು ಬಡವರ ನಿವೇಶನವನ್ನು ಕಬಳಿಸಿ ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು,
ಸಿದ್ದರಾಮಯ್ಯ ಅವರ ಮೇಲಿನ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರಕಾರವು ಮತ್ತು ಮುಖಂಡರು ಆರೋಪಗಳನ್ನು ಮಾಡಿದ್ದರು ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟಾಚಾರದ ಆರೋಪದ ಸಿಎಂಗೆ ಹಿನ್ನಡೆಯಾಗಿದೆ ಸಿದ್ದರಾಮಯ್ಯ ಅವರಿಗೆ ಸಂವಿಧಾನದ ಬಗ್ಗೆ ನ್ಯಾಯಾಲಯದ ಬಗ್ಗೆ ಗೌರವವಿದ್ದರೆ ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಾಗರಾಜ್ ಒತ್ತಾಯಿಸಿದರು,