ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ಅವರ ತಂದೆ, ತಾಯಿ ಸಿಎಂ ಸಿದ್ದರಾಮಯ್ಯನವರನ್ನಯ ಭೇಟಿಯಾಗಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿ, ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ನಂತರ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ನಮ್ಮ ಸರ್ಕಾರವು ರೇಣುಕಾಸ್ವಾಮಿಯ ಸಾವಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಸರ್ಕಾರದಿಂದ ಸಾಧ್ಯವಿರುವ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.