Categories: ಮೈಸೂರು

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಮುಂದುವರಿದ‌ ಪಡಿತರ ಕಾಳಸಂತೆ

ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೈಸೂರು ಜಿಲ್ಲೆಯ ಕೆ ಆರ್‌ ನಗರ ಹಾಸನ ರಸ್ತೆಯ ತಾಲ್ಲೂಕು ಕೃಷಿ ಮಾರಕಟ್ಟೆ ಬಳಿ ನಡೆದಿದೆ…

ಪಡಿತರ ಅಂಗಡಿಯ ಬದಲು ಕಾಳಸಂತೆಗೆ ಲಾರಿಯಲ್ಲಿ ಸಾಗಾಣೆ ಮಾಡುವ ವೇಳೆ 90 ಮೂಟೆ 46 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ…

ಡಿವೈಎಸ್‌ಪಿ ರಾಜಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಲಾರಿ ಚಾಲಕ ಪರಾರಿಯಾಗಿದ್ದಾನೆ‌.

ಮಾರುಕಟ್ಟೆಯ ಹಿಂಬದಿ ದ್ವಾರದಿಂದ ಸಾಗಾಣೆ ಮಾಡಲಾಗುತ್ತಿತ್ತು.

ಮುಂದೆ ಎಂಟ್ರಿ ಮಾಡಿಸಿ ಹೊರಗೆ ದಾಸ್ತಾನು ತೆಗೆದುಕೊಂಡು ಹೋಗಬೇಕಿತ್ತು. ಆದರೆ, ಮಾರುಕಟ್ಟೆಯ ಹಿಂಬದಿ ದ್ವಾರದಿಂದ ಸಾಗಾಣೆ ಮಾಡಲಾಗುತ್ತಿತ್ತು.

ತಾಲ್ಲೂಕು ಕೃಷಿ ಮಾರುಕಟ್ಟೆ ಕಾರ್ಯದರ್ಶಿ ರವಿ ವಿರುದ್ಧ ರೇಷನ್ ಅಂಗಡಿ ಬದಲು ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ..

ಘಟನೆ ನಂತರ ರವಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಸದ್ಯ ಯಾರ ಸಂಪರ್ಕಕ್ಕೂ ರವಿ ಸಿಗುತ್ತಿಲ್ಲ.  ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ….

Ramesh Babu

Journalist

Recent Posts

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

7 seconds ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

11 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

19 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago