ಸಿಎಂ ಸಿದ್ದರಾಮಯ್ಯ ಅವರ ಬಳಿ ಇದ್ದ ಹೆಚ್ಚುವರಿ ಖಾತೆಗಳನ್ನು ಇಬ್ಬರು ಸಚಿವರುಗಳಿಗೆ ಮರುಹಂಚಿಕೆ ಮಾಡಿ ಆದೇಶಿಸಲಾಗಿದೆ.
ಸಿಎಂ ಬಳಿ ಇದ್ದ ಐಟಿ, ಬಿಟಿ ಖಾತೆಯನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹಾಗೂ ಮೂಲಸೌಕರ್ಯ ಖಾತೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮರು ಹಂಚಿಕೆ ಮಾಡಲಾಗಿದೆ.