ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷ ಮತ್ತು ಹಿಂದುಳಿದ ವರ್ಗದಿಂದ ಸೋಮವಾರ ನಗರದ ಹೊಸ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಸಂವಿಧಾನದ ಬದ್ದವಾಗಿ 136 ಶಾಸಕರಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಅವರ ಅಣತಿಯಂತೆ ಕರ್ನಾಟಕದ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಯಾವುದೇ ತನಿಖಾ ತಂಡಕ್ಕೆ ದೂರು ಬಂದಿಲ್ಲ. ಆದರೆ, ಯಾರೋ ಒಬ್ಬ ಸಾಮಾನ್ಯ ವ್ಯಕ್ತಿ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ಸಿಎಂಗೆ ನೋಟಿಸ್ ಕೊಡತ್ತಾರೆ ಎಂದರೆ ರಾಜ್ಯಪಾಲರು ಯಾರ ಪರವಾಗಿದ್ದಾರೆ ಎಂಬುದು ಅರ್ಥವಾಗುತ್ತದೆ. ಹಿಂದೆ ಯಡಿಯೂರಪ್ಪ ಸರಕಾರದ ವಿರುದ್ದ ಕಾಂಗ್ರೆಸ್ ಪಕ್ಷವು ಕೊಟ್ಟ ದೂರುಗಳಿಗೆ ಯಾಕೆ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿನ ಮುಡಾ ಮತ್ತು ವಾಲ್ಮೀಕಿ ಪ್ರಕರಣದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಗೆ ಅವಕಾಶವು ಕೊಟ್ಟಿಲ್ಲ ಬಿಜೆಪಿಯಿಂದ ಅಧಿಕಾರ ಕೈತಪ್ಪಿ ಹೋದ ಕಡೆಗಳಲ್ಲಿ ವಾಮಮಾರ್ಗದ ಮೂಲಕ ಅಧಿಕಾರ ಪಡೆಯುವ ಯತ್ನ ನಡೆಸಲು ಹೊರಟಿದ್ದಾರೆ. ಬಿಜೆಪಿ ವಿರುದ್ಧ ದನಿ ಎತ್ತಿದರೆ ಅವರ ವಿರುದ್ಧ ಪಿತೂರಿ ನಡೆಸಿ ಪ್ರಕರಣ ದಾಖಲಿಸುವ ಪ್ರವೃತ್ತಿ ಹೊಂದಿರುವ ಕೇಂದ್ರ ಸರ್ಕಾರವು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇ.ಡಿ., ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ಹತ್ತಿಕ್ಕುವ ಪ್ರಯತ್ನ ನಡಸುತ್ತಿರುವುದು ಖಂಡನೀಯವಾಗಿದೆ ಎಂದರು.
ಮುಡಾದಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲದ ಪ್ರಕರಣವನ್ನು ಬಳಸಿಕೊಂಡು ಸಿದ್ದರಾಮಯ್ಯ ಅವರನ್ನು ಹತ್ತಿಕ್ಕಲು ಮುಂದಾಗಿರುವ ಕೇಂದ್ರ ಸರ್ಕಾರದ ಅಣತಿಯಂತೆ ಹಮ್ಮಿಕೊಂಡಿರುವ ಮೈಸೂರು ಪಾದಯಾತ್ರೆ ಆಂದೋಲನವು ಅರ್ಥಹೀನವಾಗಿದೆ. ಇದೇ ರೀತಿ ಕಾಂಗ್ರೆಸ್ ವಿರುದ್ದದ ಆರೋಪಗಳು ಮುಂದುವರೆದರೆ ಜಿಲ್ಲೆಯಾದ್ಯಂತ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸೇರಿದಂತೆ ಶಾಸಕರ ನೇತೃತ್ವದಲ್ಲಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ, ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಬೆಳವಣಿಗೆ ಆಗಿದೆ ಕುತಂತ್ರದ ರಾಜಕೀಯ ಮಾಡಲಾಗುತ್ತಿದೆ. ಹಿಂದುಳಿದವರು ಯಾವುದೇ ಕಾರಣಕ್ಕೂ ಅಧಿಕಾರದಲ್ಲಿ ಇರಬಾರದು ಎಂಬುದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಮೂರು ಬಾರಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷಕ್ಕೆ ದಕ್ಷಿಣ ಭಾರತದಲ್ಲಿ ಅಧಿಕಾರ ಹಿಡಿಯಲು ಅವಕಾಶವಿರುವ ಕರ್ನಾಟಕದಲ್ಲಿ ಅಧಿಕಾರ ಸಿಗಲಿಲ್ಲ. ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕು ಎಂಬ ಉದ್ದೇಶದಿಂದ ಸುಳ್ಳು ಆರೋಪವನ್ನು ಮುಖ್ಯಮಂತ್ರಿ ಮೇಲೆ ಮಾಡಲಾಗುತ್ತಿದೆ. ಅವರ ಹೆಸರಿಗೆ ಮಸಿ ಬಳಿಯಲು ನಾವು ಬಿಡುವುದಿಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ವಕ್ತಾರ ಎಲ್.ಎ ಮಂಜುನಾಥ್, ಬ್ಲಾಕ್ ಅಧ್ಯಕ್ಷರಾದ ಸೀಸಂದ್ರ ಗೋಪಾಲಗೌಡ, ಪ್ರಸಾದ್ ಬಾಬು, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಅಂಜನಿ ಸೋಮಣ್ಣ, ಅಂಬರೀಷ್, ಕೆ.ಜಯದೇವ್, ಒಬಿಸಿ ಮಂಜುನಾಥ್, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಕುಮಾರ್, ರತ್ನಮ್ಮ, ಮುಂತಾದವರು ಇದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…