ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ದೂರಿನ ಮೇರೆಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಬಗ್ಗೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಸೂಚಿಸಲಾಗಿದೆ.
ಅರಮನೆ ಮೈದಾನದಲ್ಲಿ ಬೃಹತ್ ಒಬಿಸಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿ.ಕೆ. ಹರಿಪ್ರಸಾದ್, ಸಿದ್ದರಾಮಯ್ಯ ಅವರು ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ, ದೇವರಾಜ ಅರಸು ಚಿಂತನೆ ಇರಬೇಕು ಎಂದು ಟೀಕಿಸಿದ್ದರು.
ಈ ಹಿನ್ನೆಲೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡುವ ಮೂಲಕ ಎಐಸಿಸಿ ಸೂಚಿಸಲಾಗಿದೆ.